ಕರ್ನಾಟಕ

karnataka

ETV Bharat / state

ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗುವುದು: ಸಚಿವ ಲಕ್ಷ್ಮಣ್​ ಸವದಿ

ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಮನೆ ಹಾಗೂ ಬೆಳೆ ವಿಮೆ ಒದಗಿಸುವುದು ನಮ್ಮ ಮುಂದಿನ ದೊಡ್ಡ ಸವಾಲಾಗಿದೆ. ಪರಿಹಾರ ಮೊತ್ತ ಹೆಚ್ಚಳ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಲಕ್ಷ್ಮಣ್​ ಸವದಿ ಹೇಳಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಪುನರ್ವಸತಿ ನೀಡಲಾಗುವುದು;ಸಚಿವ ಲಕ್ಷ್ಮಣ ಸವದಿ

By

Published : Aug 23, 2019, 10:54 PM IST

ಬೆಳಗಾವಿ:ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ಮನೆ ಹಾಗೂ ಬೆಳೆ ವಿಮೆ ಒದಗಿಸುವುದು ನಮ್ಮ ಮುಂದಿನ ದೊಡ್ಡ ಸವಾಲಾಗಿದೆ. ಪರಿಹಾರ ಮೊತ್ತ ಹೆಚ್ಚಳ ಹಾಗೂ ಪುನರ್ವಸತಿಗೆ ಸಂಬಂಧಿಸಿದಂತೆ ಇರುವ ತಾಂತ್ರಿಕ ಅಡೆತಡೆಗಳನ್ನು ನಿವಾರಿಸಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಲಕ್ಷ್ಮಣ್​ ಸವದಿ ಹೇಳಿದ್ರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನರ ರಕ್ಷಣೆ ಹಾಗೂ ಪರಿಹಾರ ಕೇಂದ್ರಗಳ ಮೂಲಕ ಊಟೋಪಹಾರ ಮತ್ತು ಉತ್ತಮ ಸೌಲಭ್ಯ ಒದಗಿಸಲಾಗಿದೆ. ಸಂತ್ರಸ್ತರಿಗೆ ಸೂಕ್ತ ಪರಿಹಾರ, ಪುನರ್ವಸತಿ ಸ್ಥಳಾಂತರಕ್ಕೆ ಅಗತ್ಯವಿರುವ ನಿಯಮಾವಳಿಗಳ ವಿನಾಯಿತಿ ಅಥವಾ ಮಾರ್ಪಾಡು ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮ ಕೈಕೊಳ್ಳಲಾಗುವುದು ಎಂದರು.

ಇದೇ ವೇಳೆ ಆರೋಗ್ಯ ಸಮಸ್ಯೆ ಉದ್ಭವಿಸದಂತೆ ಮುಂಜಾಗ್ರತೆ ವಹಿಸಬೇಕು. ಮುಂಬರುವ ದಿನಗಳಲ್ಲಿ ರಸ್ತೆ ಸಂಚಾರ ಕಡಿತವಾಗದಂತೆ ಹಾಗೂ ನೀರು ಸರಾಗವಾಗಿ ಹರಿಯುವಂತೆ ಫ್ಲೈ ಓವರ್ ಮಾದರಿಯಲ್ಲಿ ಸೇತುವೆಗಳನ್ನು ನಿರ್ಮಿಸಬೇಕಿದೆ ಎಂದು ಚಿಕ್ಕೋಡಿ ಉಪ ವಿಭಾಗದ ಪ್ರವಾಹ ನಿರ್ವಹಣೆ ಉಸ್ತುವಾರಿ ವಹಿಸಿರುವ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ರು.

ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಮಾತನಾಡಿ, ಪರಿಹಾರ ವಿತರಣೆಗೆ ಅಗತ್ಯವಿರುವ ದಾಖಲಾತಿಗಳಿಗೆ ಒತ್ತು ನೀಡದೇ ಆದಷ್ಟು ಬೇಗ ಪರಿಹಾರ ತಲುಪಿಸುವ ಕೆಲಸ ಮಾಡಬೇಕು ಎಂದಿದ್ದಾರೆ.

ABOUT THE AUTHOR

...view details