ಅಥಣಿ: ಈಗಾಗಲೇ ಡೀಸೆಲ್ ಬೆಲೆ ಏರಿಕೆಯಾಗಿದೆ. ಆದರೆ ಬಸ್ ಟಿಕೆಟ್ ದರವನ್ನು ಸ್ವಲ್ಪ ಸಮಯದವರೆಗೆ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.
ಪಟ್ಟಣದಲ್ಲಿ ಬಸ್ ಘಟಕ ಮರುನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈಗಾಗಲೇ ಕೊರೊನಾದಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ. ಮತ್ತೆ ನಮ್ಮ ಸಾರಿಗೆ ಇಲಾಖೆಯಿಂದ ಟಿಕೆಟ್ ದರ ಹೆಚ್ಚಳ ಮಾಡಿ ಮತ್ತಷ್ಟು ಹೊರೆ ಹಾಕುವುದಿಲ್ಲ. ತೈಲ ಬೆಲೆ ಏರಿಕೆ ಆದರೂ ಸದ್ಯದ ಮಟ್ಟಿಗೆ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.