ಚಿಕ್ಕೋಡಿ:ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ ಮೂವರು ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ನಾಯಕರಿಗೆ ಬೆಲೆ ಕೊಟ್ಟು ನಾಮಪತ್ರ ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಎಲ್ಲರೂ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಅಥಣಿ ಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ: ಎಂ.ಬಿ.ಪಾಟೀಲ್ - ಅಥಣಿಯಲ್ಲಿ ಮಾಜಿ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ
ಅಥಣಿಯಲ್ಲಿ ಪಕ್ಷೇತರರಾಗಿ ಸ್ಪರ್ಧೆಗಿಳಿದಿದ್ದ ಮೂವರು ಅಭ್ಯರ್ಥಿಗಳು ಕಾಂಗ್ರೆಸ್ ಪಕ್ಷದ ನಾಯಕರಿಗೆ ಬೆಲೆ ಕೊಟ್ಟು ನಾಮಪತ್ರ ಹಿಂದಕ್ಕೆ ತೆಗೆದುಕೊಂಡಿದ್ದಾರೆ. ಎಲ್ಲರೂ ಪಕ್ಷದ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸಲಿದ್ದೇವೆ ಎಂದು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ರು.
ಅಥಣಿ ತಹಸೀಲ್ದಾರ್ ಕಚೇರಿಯಲ್ಲಿ ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಹಜಾನ ಡೊಂಗರಗಾಂವ, ಸತೀಶಗೌಡ ಪಾಟೀಲ, ಸದಾಶಿವ ಬುಟಾಳಿ ಇವರೆಲ್ಲ ನಾಮಪತ್ರ ವಾಪಸ್ ಪಡೆದಿದ್ದಾರೆ. ಇವರೆಲ್ಲರೂ ನಮ್ಮ ಪಕ್ಷದ ಅಭ್ಯರ್ಥಿ ಗಜಾನನ ಮಂಗಸೂಳಿಯವರನ್ನು ಗೆಲ್ಲಿಸಲು ಶ್ರಮಿಸಲಿದ್ದಾರೆ. ಸಾಮೂಹಿಕ ನಾಯಕತ್ವದಲ್ಲಿ ಅಥಣಿ ಉಪ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಜನರು ನೆರೆ ಬಂದು ಬದುಕು ಕಳೆದುಕೊಂಡಾಗ ಇಲ್ಲಿನ ಶಾಸಕರಾದ ಮಹೇಶ ಕುಮಟಳ್ಳಿ ಅವರು ಮುಂಬೈ ಹೋಟೆಲ್ನಲ್ಲಿದ್ದುಕೊಂಡು ಸಂತ್ರಸ್ತರಿಗೆ ಮೋಸ ಮಾಡಿದ್ದಾರೆ. ನೆರೆ ಪೀಡಿತರ ಶಾಪ ಅವರಿಗೆ ತಟ್ಟದೆ ಬಿಡುವುದಿಲ್ಲ ಎಂದರು.
TAGGED:
Athani by election news