ಬೆಳಗಾವಿ : ರಾಜ್ಯ ಹಾಗೂ ಜಿಲ್ಲೆಯಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ನನಗೆ ಮತ ಹಾಕಿ, ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಲೋಕಸಭೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮನವಿ ಮಾಡಿದರು.
ಬೆಳಗಾವಿಯನ್ನು ದೇಶದಲ್ಲೇ ಮಾದರಿ ನಗರವನ್ನಾಗಿ ಮಾಡುತ್ತೇನೆ : ಸತೀಶ್ ಜಾರಕಿಹೊಳಿ - ಮುಖಂಡರೊಂದಿಗೆ ಸತೀಶ್ ಜಾರಕಿಹೊಳಿ ಸಭೆ
ಕಳೆದ 30 ವರ್ಷಗಳಿಂದ ಮಾಡಿದ ಅಭಿವೃದ್ದಿ ಕೆಲಸಗಳನ್ನು ನೋಡಿ ಮತ ಹಾಕಿ ಗೆಲ್ಲಿಸಿದರೆ ಉಸಿರು ಇರುವವರೆಗೆ ಬೆಳಗಾವಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಇಲ್ಲಿನ ರಾಮತೀರ್ಥ ನಗರದ ಸಂಕಲ್ಪ ಗಾರ್ಡನ್ನಲ್ಲಿ ವಿವಿಧ ಸಮಾಜದ ಮುಖಂಡರೊಂದಿಗಿನ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ಮಾಡಿದ ಅಭಿವೃದ್ದಿ ಕೆಲಸಗಳನ್ನು ನೋಡಿ ಮತ ಹಾಕಿ ಗೆಲ್ಲಿಸಿದರೆ ಉಸಿರು ಇರುವವರೆಗೆ ಬೆಳಗಾವಿ ಅಭಿವೃದ್ಧಿಗೆ ಶ್ರಮಿಸುತ್ತೇನೆ. ರಾಜ್ಯ ಹಾಗೂ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸಿದೆ. ಕ್ಷೇತ್ರದ ಜನರು ನನ್ನ ಮೇಲೆ ಆಶೀರ್ವಾದ ಮಾಡಿದರೆ, ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡುವ ಮೂಲಕ ಮಾದರಿ ನಗರವನ್ನಾಗಿ ಮಾಡಲು ಶತಗತಾಯ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಿಮ್ಮ ಆಶೀರ್ವಾದ ಕೇಳಲು ನಾನು ಬಂದಿದ್ದೇನೆ. ನೀವೆಲ್ಲರೂ ಒಗ್ಗಟ್ಟಾಗಿ ಗೆಲ್ಲಲು ಸಹಕಾರ ನೀಡಬೇಕು. ಏ.17ರಂದು ನಡೆಯುವ ಚುನಾವಣೆಯಲ್ಲಿ ಆಶೀರ್ವಾದ ಮಾಡಿದರೆೆ ಬೆಳಗಾವಿ ನಗರವನ್ನು ದೇಶದಲ್ಲೇ ಮಾದರಿ ನಗರವನ್ನಾಗಿ ಮಾಡುವೆ ಎಂದು ಹೇಳಿದರು.