ಕರ್ನಾಟಕ

karnataka

ETV Bharat / state

ಪತಿಯ ಕಿರುಕುಳಕ್ಕೆ ಬೇಸತ್ತ ಮಹಿಳಾ ಕಾನ್ಸ್​​​ಟೇಬಲ್ ನೇಣಿಗೆ ಶರಣು - Woman Constable Suicide

ಪತಿಯ ಕಿರುಕುಳಕ್ಕೆ ಬೇಸತ್ತ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್ಸ್​ಟೇಬಲ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

woman-constable-suicide
ಪತಿಯ ಕಿರುಕುಳಕ್ಕೆ ಬೇಸತ್ತ ಮಹಿಳಾ ಕಾನ್ಸಟೇಬಲ್ ನೇಣಿಗೆ ಶರಣು

By

Published : Feb 26, 2021, 9:38 PM IST

ಬೆಳಗಾವಿ: ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಕಾನ್ಸ್​ಟೇಬಲ್ ಪತಿಯ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದಾರೆ.

ಜಿಲ್ಲೆಯ ರಾಮದುರ್ಗ ತಾಲೂಕಿನ ಹಂಪಿಹೊಳಿ ಗ್ರಾಮದ ಸುಜಾತಾ ಬಸಪ್ಪ ಕರೆನ್ನವರ (29) ಮೃತ ದುರ್ದೈವಿ. ಈಕೆ 2014ರಲ್ಲಿ ಮಹಿಳಾ ಕಾನ್ಸ್​ಟೇಬಲ್ ಆಗಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಸೇವೆ ಆರಂಭಿಸಿದ್ದರು. ಇತ್ತ ಪತಿ ಹಣುಮಂತಗೌಡ ಪಾಟೀಲ್‍ ಪಂತ್‍ನಗರದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಂಬ್ರಾ ಗ್ರಾಮದಲ್ಲಿ ನೆಲೆಸಿದ್ದರು.

ಆದ್ರೆ, ದಿನ ಕಳೆದಂತೆ ಇಬ್ಬರ ನಡುವೆ ಮನಸ್ತಾಪ ಉಂಟಾಗಿದೆ ಎನ್ನಲಾಗಿದೆ. ಇದರಿಂದ ಪತಿಯ ಪ್ರತಿ ದಿನದ ಕಿರುಕುಳಕ್ಕೆ ಬೇಸತ್ತು ಸಾಂಬ್ರಾದಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮೃತ ಮಹಿಳೆಯ ಪತಿ ವಿರುದ್ಧ 306 ಮತ್ತು 498ಎ ಐಪಿಸಿ ಸೆಕ್ಷನ್‍ ಅಡಿಯಲ್ಲಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ABOUT THE AUTHOR

...view details