ಬೆಳಗಾವಿ:ಲಾರಿ ಮಹಿಳೆ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ.
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ನಿವಾಸಿ ರಮೇಜಾ ನದಾಫ್ (40) ಮೃತ ಮಹಿಳೆ. ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಲಾರಿ ಮಹಿಳೆ ಮೇಲೆ ಹರಿದಿದೆ.
ಇದನ್ನೂ ಓದಿ: ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಹೆಂಡ್ತಿ-ಪ್ರಿಯಕರ.. ಕೆರಳಿದ ಪತಿ ಉರುಳಿಸಿದ ವ್ಯಕ್ತಿಯ ಹೆಣ!
ಚಾಲಕನ ಅಜಾಗರೂಕತೆಯೇ ಅವಘಡಕ್ಕೆ ಕಾರಣ ಎನ್ನಲಾಗುತ್ತಿದೆ. ಸ್ಥಳಕ್ಕೆ ಎಂ.ಕೆ. ಹುಬ್ಬಳ್ಳಿ ಉಪಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತ ಮಹಿಳೆಯ ಶವವನ್ನು ಕಿತ್ತೂರು ತಾಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.