ಬೆಳಗಾವಿ:ಕಣ್ಣಿಗೆ ಖಾರದ ಪುಡಿ ಎರಚಿ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೋರ್ವ ಮಹಿಳೆಯನ್ನು ಹಾಡಹಗಲೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ತಾಲೂಕಿನ ಮಚ್ಛೆಗ್ರಾಮದ ಲಕ್ಷ್ಮಿ ನಗರದಲ್ಲಿ ನಡೆದಿದೆ.
ಬೆಳಗಾವಿಯಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಮಹಿಳೆಯರ ಜೋಡಿ ಕೊಲೆ - Women murder in Belagavi latest news
ವಾಯು ವಿಹಾರಕ್ಕೆ ಎಂದು ಲಕ್ಷ್ಮಿ ನಗರದ ಬ್ರಹ್ಮದೇವರ ದೇವಸ್ಥಾನಕ್ಕೆ ಮಹಿಳೆಯರು ಬಂದಿದ್ದರು. ಈ ವೇಳೆ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕಣ್ಣಿಗೆ ಖಾರದ ಪುಡಿ ಎರಚಿ ಮಹಿಳೆಯರ ಜೋಡಿ ಕೊಲೆ
ರಾಜಶ್ರೀ ರವಿ ಬನ್ನೂರ್(21), ರೋಹಿಣಿ ಗಂಗಪ್ಪ ಹುಲಿಮನಿ(21) ಕೊಲೆಯಾದವರೆಂದು ತಿಳಿದುಬಂದಿದೆ. ವಾಯು ವಿಹಾರಕ್ಕೆ ಎಂದು ಲಕ್ಷ್ಮಿ ನಗರದ ಬ್ರಹ್ಮದೇವರ ದೇವಸ್ಥಾನಕ್ಕೆ ಮಹಿಳೆಯರು ಬಂದಿದ್ದರು. ಈ ವೇಳೆ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.