ಚಿಕ್ಕೋಡಿ (ಬೆಳಗಾವಿ): ಇಲ್ಲಿನ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ ಸಾಧಾರಣ ಸಭೆಯಲ್ಲಿ ಆಡಳಿತ ಮಂಡಳಿ ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ಇಂದು ನಡೆದಿದೆ. ಕಬ್ಬು ಕಟಾವು ಮಾಡಿದ 15 ದಿನದೊಳಗೆ ರೈತರ ಖಾತೆಗೆ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಂತೆ ಸಭೆಯಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು.
ಇಲ್ಲಿನ ಹಳ್ಯಾಳ ಗ್ರಾಮದಲ್ಲಿ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ ಸರ್ವ ಸಾಧಾರಣ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ರೈತರು ಮತ್ತು ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರು ಪಾಲ್ಗೊಂಡಿದ್ದರು. ಈ ವೇಳೆ ರೈತರು ಕಬ್ಬು ಕಟಾವಾದ 15 ದಿನದೊಳಗೆ ಖಾತೆಗೆ ಹಣ ಬಿಡುಗಡೆ ಮಾಡುವಂತೆ ಆಡಳಿತ ಮಂಡಳಿಯ ಅಧ್ಯಕ್ಷ ಪರಪ್ಪ ಸವದಿ ಅವರನ್ನು ಒತ್ತಾಯಿಸಿದ್ದಾರೆ. ಅಲ್ಲದೇ ರೈತರ ಖಾತೆಗೆ ಹಣ ಹಾಕುವಂತೆ ಪಟ್ಟು ಹಿಡಿದಿದ್ದಾರೆ. ಈ ವೇಳೆ ರೈತರು ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರ ನಡುವೆ ಮಾತಿನ ಚಕಮಕಿ ನಡೆಯಿತು.