ಕರ್ನಾಟಕ

karnataka

ETV Bharat / state

ಚಿಕ್ಕೋಡಿಯಲ್ಲಿ ನರೇಗಾ ಕಾಮಗಾರಿ ಕಾರ್ಮಿಕರಿಂದ ಸಾಮಾಜಿಕ ಅಂತರ ಉಲ್ಲಂಘನೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿ ಕೆರೆ ಹೂಳೆತ್ತುವ ಕಾಮಗಾರಿ ಆರಂಭಿಸಲಾಗಿದೆ. ಕಾಮಗಾರಿ ನಡೆಸುವ ವೇಳೆ ಕೂಲಿ ಕಾರ್ಮಿಕರಿಂದ ಸಾಮಾಜಿಕ ನಿಯಮ ಪಾಲನೆಯಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Workers involved in Narega work
ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ನರೇಗಾ ಕಾಮಗಾರಿಯಲ್ಲಿ ಭಾಗಿಯಾದ ಕಾರ್ಮಿಕರು

By

Published : Apr 20, 2020, 10:15 PM IST

ಚಿಕ್ಕೋಡಿ:ಕೊರೊನಾ ಸೋಂಕು ತಡೆಗೆ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದ್ದು, ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯ ಕೂಲಿ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೆಲಸದಲ್ಲಿ ತೊಡಗಿದ್ದರು ಎಂಬ ಆರೋಪ ಕೇಳಿಬಂದಿದೆ.

ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನರೇಗಾ ಕಾಮಗಾರಿಯಲ್ಲಿ ಭಾಗಿಯಾದ ಕಾರ್ಮಿಕರು
ಯಮಕನಮರಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮ ಉಲ್ಲಂಘಿಸಿ ನರೇಗಾ ಯೋಜನೆ ಅಡಿ 180ಕ್ಕೂ ಹೆಚ್ಚು ಕಾರ್ಮಿಕರಿಂದ ಕೆರೆ ಹೂಳೆತ್ತುವ ಕಾಮಗಾರಿ ನಡೆಸಿದ್ದಾರೆ ಎಂದು ಆಪಾದಿಸಲಾಗಿದೆ.

ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾಮಗಾರಿ ಆರಂಭಿಸಲಾಗಿದೆ. ಕಾರ್ಮಿಕರಲ್ಲಿ ಯಾವುದೇ ಸಾಮಾಜಿಕ ಅಂತರ ಇಲ್ಲದೆ, ಮುಂಜಾಗ್ರತಾ ಕ್ರಮಗಳು ತೆಗೆದುಕೊಳ್ಳದೆ ಕಾಮಗಾರಿ ನಡೆಸುತ್ತಿರುವುದು ಎಷ್ಟು ಸರಿ ಎಂದು ಪಿಡಿಓ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details