ಕರ್ನಾಟಕ

karnataka

ETV Bharat / state

ಅಧಿಕಾರ ಅನುಭವಿಸಲಷ್ಟೇ ಯಡಿಯೂರಪ್ಪ ಸಿಎಂ ಆಗಿದ್ದಾರೆ: ಸತೀಶ ಜಾರಕಿಹೊಳಿ

ಪ್ರವಾಹದಿಂದಾಗಿ ಜನರ ಬದುಕು ಬೀದಿಗೆ ಬಂದಿದೆ ಆದರೆ ಸರ್ಕಾರ ಆಗಲಿ, ಮುಖ್ಯಮಂತ್ರಿಗಳಾಗಲೀ ಈ ಬಗ್ಗೆ ಗಮನ ಹರಿಸದೇ ಅವರ ಆಂತರಿಕ ಸಮಸ್ಯೆಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಬಿಎಸ್​​ವೈ ಕೇವಲ ಅಧಿಕಾರ ಅನುಭವಿಸುತ್ತಿದ್ದಾರೆ ಹೊರತು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ.

ಸಿಎಂ ವಿರುದ್ಧ ಕಿಡಿಕಾರಿದ ಸತೀಶ ಜಾರಕಿಹೊಳಿ

By

Published : Sep 23, 2019, 7:21 PM IST

ಬೆಳಗಾವಿ: ಪ್ರವಾಹದಿಂದ ಬೆಳಗಾವಿ ಜಿಲ್ಲೆಯ ಜನರ ಬದುಕು‌ ಬೀದಿಗೆ ಬಂದರೂ ಸಿಎಂ ಸ್ಪಂದಿಸುತ್ತಿಲ್ಲ. ಅಧಿಕಾರ ಅನುಭವಿಸಲಷ್ಟೇ ಯಡಿಯೂರಪ್ಪ ಸಿಎಂ ಆಗಿದ್ದಾರೆ ಎಂದು‌ ಮಾಜಿ‌ ಸಚಿವ ಸತೀಶ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ವಿರುದ್ಧ ಕಿಡಿಕಾರಿದ ಸತೀಶ ಜಾರಕಿಹೊಳಿ

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಂತರಿಕ‌ ಸಮಸ್ಯೆಗಳೇ ಹೆಚ್ಚಾಗಿವೆ. ಪ್ರವಾಹ ಸಂತ್ರಸ್ತರ ನೆರವಿಗೆ ದಾವಿಸಲು ಯಡಿಯೂರಪ್ಪಗೆ ಸಮಯ ಸಿಗುತ್ತಿಲ್ಲ. ಕೇವಲ ರಾಜಕೀಯ ಮಾಡಿಕೊಂಡು ಅಧಿಕಾರ ಅನುಭವಿಸುತ್ತಿದ್ದಾರೆ. ಪ್ರವಾಹದಿಂದ ‌ಜನರ‌ ಬದುಕು ಬೀದಿಗೆ ಬಂದರೂ ಸಿಎಂ ಹೆಚ್ಚು‌ ತಲೆ ಕೆಡಿಸಿಕೊಳ್ಳುತ್ತಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಅನರ್ಹ ಶಾಸಕರ ವಿಚಾರಣೆ ಇರುವ ಕಾರಣ ಸಿಎಂ ಟೆನ್ಷನ್​​ನಲ್ಲಿದ್ದಾರೆ. ಸರ್ಕಾರ‌ ಏನಾಗುತ್ತೆ ಎಂಬ ಆತಂಕ ಅವರಿಗಿದೆ. ಅನರ್ಹ ಶಾಸಕರೆಲ್ಲರೂ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎಂದರು.

ಬಿಜೆಪಿ ಶ್ರಮ ಪಟ್ಟು ಅಧಿಕಾರಕ್ಕೆ ಬಂದಿಲ್ಲ, ಹೀಗಾಗಿ ಜನರ ಕಷ್ಟ ಅವರಿಗೆ ಅರಿವಾಗುತ್ತಿಲ್ಲ. ಸರ್ಕಾರದ ‌ಗಮನ ಸೆಳೆಯಲೆಂದೇ ನಾಳೆ‌ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ‌ದಿನೇಶ ಗುಂಡೂರಾವ್, ಮಾಜಿ ಡಿಸಿಎಂ‌ ಡಾ.ಜಿ. ಪರಮೇಶ್ವರ ಸೇರಿದಂತೆ ಮಾಜಿ ಸಚಿವರು, ಶಾಸಕರು ಹಾಗೂ ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಡಿಸಿ ಕೂಡ ನಮ್ಮ ಸಮಾವೇಶಕ್ಕೆ ಲಿಖಿತ ರೂಪದಲ್ಲಿ ಅನುಮತಿ ನೀಡಿದ್ದಾರೆ. ಕಾಂಗ್ರೆಸ್ ಭವನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಬಳಿಕ ಡಿಸಿ ಕಚೇರಿ ಮುಂದೆ ಸಭೆ ನಡೆಯಲಿದ್ದು, 25 ಸಾವಿರಕ್ಕೂ ಅಧಿಕ ಜನರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ABOUT THE AUTHOR

...view details