ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಯುವಕನ ಬರ್ಬರ ಕೊಲೆ..ಯುವತಿ ಜೊತೆಗಿನ ಪ್ರೀತಿಯೇ ಹತ್ಯೆಗೆ ಕಾರಣವಾಯ್ತಾ? - ಬೆಳಗಾವಿ ಖಾನಾಪುರದಲ್ಲಿ ಯುವಕನ ಕೊಲೆ

ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ

young-man-found-murdered-in-belagavi
ಬೆಳಗಾವಿಯಲ್ಲಿ ಯುವಕನ ಬರ್ಬರ ಕೊಲೆ... ಯುವತಿ ಜೊತೆಗಿನ ಪ್ರೀತಿಯೇ ಹತ್ಯೆಗೆ ಕಾರಣವಾಯ್ತಾ?

By

Published : Oct 2, 2021, 12:45 PM IST

ಬೆಳಗಾವಿ:ಅನ್ಯ ಸಮುದಾಯದ ಯುವತಿ ಪ್ರೀತಿಸಿ, ಮದುವೆ ಆಗಲು ನಿರ್ಧರಿಸಿದ್ದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಖಾನಾಪುರ ಪಟ್ಟಣದ ನಿವಾಸಿ ಅರ್ಬಾಜ್ ಮುಲ್ಲಾ (24) ಕೊಲೆಯಾದ ಯುವಕ. ಸೆ. 28ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯುವತಿಯ ಕುಟುಂಬಸ್ಥರ ವಿರೋಧದ ನಡುವೆಯೂ ಅರ್ಬಾಜ್ ಆಕೆಯನ್ನು ಪ್ರೀತಿಸುತ್ತಿದ್ದ, ಅಲ್ಲದೇ ಮದುವೆಯಾಗಲು ಸಿದ್ಧನಾಗಿದ್ದ ಎಂದು ತಿಳಿದು ಬಂದಿದೆ. ಸೆ.28ರಂದು ಮಧ್ಯರಾತ್ರಿ ದುಷ್ಕರ್ಮಿಗಳು ಅರ್ಬಾಜ್​ನನ್ನು ಕೊಲೆ ಮಾಡಿ ಖಾನಾಪುರ ಹೊರವಲಯದ ರೈಲ್ವೆ ಹಳಿ ಮೇಲೆ ಬಿಸಾಡಿ ಪರಾರಿಯಾಗಿದ್ದಾರೆ.

ಬೆಳಗಾವಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಖಾನಾಪುರ ಠಾಣೆಗೆ ವರ್ಗಾವಣೆಗೊಂಡಿದೆ. ಆರೋಪಿಗಳಿಗೆ ಖಾನಾಪುರ ಪೊಲೀಸರು ಶೋಧ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಕ್ರೂರಿ ಕೋವಿಡ್​ಗೆ ಪತಿ ಬಲಿ.. ನೋವಿನಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆ ಆತ್ಮಹತ್ಯೆ

ABOUT THE AUTHOR

...view details