ಚಿಕ್ಕೋಡಿ:ಬಸ್ ಚಕ್ರಕ್ಕೆ ಸಿಲುಕಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಬೈಕ್ ಸವಾರನ ಓವರಟೇಕ್ ಎಡವಟ್ಟು: ಹಿಂಬದಿ ಯುವಕ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವು
ಚಿಕ್ಕೋಡಿಯಲ್ಲಿ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕೋಡಿ ರಸ್ತೆ ಅಪಘಾತದಲ್ಲಿ ಯುವಕ ಸಾವು
ಕಾಗವಾಡದ ನಿಖಿಲ್ ಪಾಟೀಲ ಮೃತ ಯುವಕ ಎಂದು ಗುರುತಿಸಲಾಗಿದ್ದು, ತಾಲೂಕಿನ ಹಾರೋಗೇರಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಬಸ್ ಅನ್ನು ಓವರ್ಟೇಕ್ ಮಾಡುವ ವೇಳೆ ಬೈಕ್ ಹಿಂಬದಿ ಕುಳಿತ್ತಿದ್ದ ಯುವಕ ಆಯತಪ್ಪಿ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಬೈಕ್ ಸವಾರ ಪರಾರಿಯಾಗಿದ್ದು, ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿಂದು ಕೊರೊನಾ ಸ್ಫೋಟ : ಒಂದೇ ದಿನ 566 ಮಂದಿಗೆ ಸೋಂಕು ದೃಢ