ಬೆಳಗಾವಿ: ತಂದೆಯ ಜತೆಗೆ ಆಸ್ಪತ್ರೆಗೆ ಬಂದಿದ್ದ ಯುವಕ ಕಟ್ಟಡದ ಮೇಲಿಂದ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ, ನಗರದ ಕಡೋಲ್ಕರ್ ಗಲ್ಲಿಯಲ್ಲಿ ನಡೆದಿದೆ.
ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ರೋಹನ್ ಕುಪ್ಪೇಕರ್(25) ಮೃತ ಯುವಕ. ಈತ ಕಟ್ಟಡದ ಮೇಲಿಂದ ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರೋಹನ್ ತನ್ನ ತಂದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದನೆಂಬ ಮಾಹಿತಿ ಲಭ್ಯವಾಗಿದ್ದು, ಕಟ್ಟಡದ ಮೇಲಿಂದ ಬಿದ್ದಿದ್ದೇಕೆ ಎಂಬುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕಾಗಮಿಸಿದ ಪೊಲೀಸರು ಪ್ರಕರಣ ಕುರಿತು ತನಿಖೆ ನಡೆಸುತ್ತಿದ್ದಾರೆ.
ಯುವಕನ ಮೃತದೇಹವನ್ನು ಬೆಳಗಾವಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.