ಬೆಳಗಾವಿ:ಗಣೇಶನ ವಿಗ್ರಹ ನಿಮಜ್ಜನದ ಸಂದರ್ಭದಲ್ಲಿ ಆರಂಭವಾದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ. ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನಗೌಡ ಪಾಟೀಲ (20) ಕೊಲೆಯಾದ ಯುವಕನಾಗಿದ್ದಾನೆ.
ಶನಿವಾರ ಸಂಜೆ ನಡೆದ ಗಣೇಶ ನಿಮಜ್ಜನದ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ. ಮತ್ತೊಂದು ಗುಂಪಿನ ಯುವಕನೊಬ್ಬ ಅರ್ಜುನಗೌಡನಿಗೆ ಚಾಕು ಇರಿದಿದ್ದಾನೆ. ಈ ವೇಳೆ ಯುವಕ ಕುಸಿದು ಬೀಳುತ್ತಿದ್ದಂತೆ ಎದುರಾಳಿ ಗುಂಪಿನವರು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.