ಬೆಳಗಾವಿ: ಜಿಲ್ಲಾಧಿಕಾರಿ ಮಹಾಂತೇಶ ಜಿ.ಹಿರೇಮಠ ಅವರಿಗೆ ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆಯವರು ರಾಖಿ ಕಟ್ಟಿ ರಕ್ಷಾ ಬಂಧನ ಆಚರಿಸಿದರು.
ಬೆಳಗಾವಿ ಡಿಸಿಗೆ ರಾಖಿ ಕಟ್ಟಿ ಶುಭ ಕೋರಿದ ಜಿ.ಪಂ ಅಧ್ಯಕ್ಷೆ - Rakshabandhan news
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಹಮ್ಮಿಕೊಂಡ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರಿಗೆ ರಾಖಿ ಕಟ್ಟಿ ಶುಭಾಶಯ ಕೋರಿದರು.
ಬೆಳಗಾವಿ ಡಿಸಿಗೆ ರಾಖಿ ಕಟ್ಟಿ, ಶುಭ ಕೋರಿದ ಜಿ.ಪಂ ಅಧ್ಯಕ್ಷೆ
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಹಮ್ಮಿಕೊಂಡ ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ಐಹೊಳೆ ಅವರು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರಿಗೆ ರಾಖಿ ಕಟ್ಟಿ ಶುಭಾಶಯ ಕೋರಿದರು.
ನಂತರ ಕಾಂಗ್ರೆಸ್ ನಾಯಕಿ ವಿಜಯಾ ಹಿರೇಮಠ ಅವರು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಅವರಿಗೆ ರಾಖಿ ಕಟ್ಟಿದರು. ಈ ವೇಳೆ ಜಿಲ್ಲಾಧಿಕಾರಿ ಹಿರೇಮಠ ಅವರು ಕೈ ಮುಗಿದು ಧನ್ಯವಾದ ಸಲ್ಲಿಸಿದರು.