ಹೊಸಪೇಟೆ (ವಿಜಯನಗರ): ತುಂಗಭದ್ರಾ ಜಲಾಶಯಕ್ಕೆ 11,820 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೆಲ ದಿನಗಳಿಂದ ತಗ್ಗಿದ್ದ ಒಳಹರಿವು ಇಂದು ಮತ್ತೆ ಹೆಚ್ಚಳವಾಗಿದೆ. ಸದ್ಯ ಜಲಾಶಯದಲ್ಲಿ 1611.35 ಅಡಿಯಷ್ಟು ತುಂಬಿದ್ದು, 37.897 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 11,820 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ತುಂಗಭದ್ರಾ ಜಲಾಶಯದಲ್ಲಿ ಕಳೆದ ಬಾರಿಗಿಂತ 13 ಟಿಎಂಸಿ ಹೆಚ್ಚು ನೀರು ಸಂಗ್ರಹ
ಕಳೆದ 10 ದಿನಗಳಿಂದ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ತಗ್ಗಿತ್ತು. ಈಗ ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹಾಗಾಗಿ ಒಳಹರಿವು ಹೆಚ್ಚಳವಾಗಿದೆ.
ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ
ಕಳೆದ ಬಾರಿ ಇದೇ ವೇಳೆ 24.488 ಟಿಎಂಸಿ ನೀರು ಸಂಗ್ರಹವಾಗಿತ್ತು. ಕಳೆದ ವರ್ಷಕ್ಕಿಂತ 13 ಟಿಎಂಸಿ ನೀರು ಹೆಚ್ಚು ಸಂಗ್ರಹವಾಗಿದೆ. ಕಳೆದ 10 ದಿನಗಳಿಂದ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ತಗ್ಗಿತ್ತು. ಈಗ ತುಂಗಭದ್ರಾ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹಾಗಾಗಿ ಒಳಹರಿವು ಹೆಚ್ಚಳವಾಗಿದೆ. ಜುಲೈ 18 ರಿಂದ ಕಾಲುವೆಗಳಿಗೆ ನೀರು ಹರಿಸುವ ಕುರಿತು ಈಗಾಗಲೇ ತೀರ್ಮಾನ ಕೈಗೊಳ್ಳಲಾಗಿದೆ. ಈಗ ಒಳಹರಿವು ಹೆಚ್ಚಳವಾಗಿದ್ದು ರೈತರಿಗೆ ಸಂತಸ ಮೂಡಿಸಿದೆ.
ಇದನ್ನೂ ಓದಿ:Be Alert: ರಾಜ್ಯದಲ್ಲಿ ಜುಲೈ 19ರವರೆಗೆ ಗುಡುಗು ಸಹಿತ ಆರ್ಭಟಿಸಲಿದೆ ಭಾರಿ ಮಳೆ