ಬಳ್ಳಾರಿ: ಜಿಲ್ಲೆಯಲ್ಲಿಂದು ಹೊಸದಾಗಿ 136 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3245ಕ್ಕೇರಿಕೆಯಾಗಿದೆ ಮತ್ತು ಇಬ್ಬರು ಬಲಿಯಾಗಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿಂದು 136 ಕೊರೊನಾ ಪಾಸಿಟಿವ್ ಪ್ರಕರಣ.. ಇಬ್ಬರು ಬಲಿ! - ಬಳ್ಳಾರಿ ಲೆಟೆಸ್ಟ್ ನ್ಯೂಸ್
ಗಣಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, 136 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಮತ್ತು ಇಬ್ಬರು ಸಾವನ್ನಪ್ಪಿದ್ದಾರೆ.
Ballary corona case
ಇಂದು ಒಂದೇ ದಿನ 136 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 3245ಕ್ಕೆ ತಲುಪಿದೆ. ಈ ಪೈಕಿ 1525 ಮಂದಿ ಗುಣಮುಖರಾಗಿದ್ದಾರೆ. 69 ಮಂದಿ ಸಾವನ್ನಪ್ಪಿದ್ದು, ಸದ್ಯ 1651 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 53 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.