ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿ 150ನೇ ಗಾಂಧಿ ಜಯಂತಿ ಆಚರಣೆ - gandhi Jayanti news

ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ಆಚರಿಸಲಾಯಿತು.

ಬಳ್ಳಾರಿಯಲ್ಲಿ 150ನೇ ಗಾಂಧಿ ಜಯಂತಿ ಆಚರಣೆ

By

Published : Oct 2, 2019, 11:49 PM IST

ಬಳ್ಳಾರಿ: ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಾತ್ಮ ಗಾಂಧೀಜಿ ಅವರ 150ನೇ ಜಯಂತಿ ಆಚರಿಸಲಾಯಿತು.

ಮಹಾತ್ಮ ಗಾಂಧೀಜಿ ಅವರು ಪ್ರತಿಪಾದಿಸಿದ ಮೌಲ್ಯಗಳು ಹಾಗೂ ತತ್ವಾದರ್ಶಗಳ ಕುರಿತ ಕಿರುಹೊತ್ತಿಗೆಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಮಹಾತ್ಮ ಗಾಂಧೀಜಿ ಅವರ ಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ‘ಮಹಾತ್ಮ ಗಾಂಧೀಜಿ 150’ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

ಕಪಗಲ್ಲುವಿನಲ್ಲಿ ಸ್ವಚ್ಛತಾ ಶ್ರಮದಾನ:

ಗಾಂಧಿ ಜಯಂತಿ ಹಿನ್ನೆಲೆ ಜಿಲ್ಲಾಡಳಿತ, ಜಿಪಂ, ಕಪಗಲ್ಲು ಗ್ರಾಪಂ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ ಚಾಲನೆ ನೀಡಿದರು. ಜಿಪಂ ಸಿಇಒ ಕೆ.ನಿತೀಶ್, ಜಿಪಂ ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ, ತಾಪಂ ಅಧ್ಯಕ್ಷೆ ಬಿ.ರಮೀಜಾ, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ಗ್ರಾಪಂ ಅಧ್ಯಕ್ಷ ರಾಮಣ್ಣ ಮತ್ತಿತರರು ಪಾಲ್ಗೊಂಡಿದ್ದರು.

ನಜೀರ್ ಸಭಾಂಗಣದಲ್ಲಿ ಗಾಂಧಿ ಜಯಂತಿ ಆಚರಣೆ:

ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘ ಇವರ ಸಂಯುಕ್ತಾಶ್ರದಲ್ಲಿ ನಗರದ ಜಿಪಂ ನಜೀರ್ ಸಭಾಂಗಣದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು.

ಸತ್ಯ ಹಾಗೂ ಅಹಿಂಸೆಯ ಹೋರಾಟದ ಹಾದಿ ಮೂಲಕ ದೇಶ ಸೇವೆ ಮಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಪಣಕ್ಕಿಟ್ಟ ಮಹಾನ್ ವ್ಯಕ್ತಿ ಮಹಾತ್ಮ ಗಾಂಧಿ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜಸೋಮಶೇಖರ್ ಸಿ.ಆರ್. ಹೇಳಿದರು.

ಒಂದು ಸಾವಿರ ಹತ್ತಿ ಬಟ್ಟೆ ಚೀಲ ಉಚಿತ ವಿತರಣೆ:

ನಗರದ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಗಾಂಧಿ ಜಯಂತಿ‌ ಆಚರಿಸಲಾಯಿತು. ನಂತರ ರಾಷ್ಟ್ರೀಯ ಸೇವಾ ಸಂಘ ಜ್ಯೋತಿ, ವಾಣಿ ಮತ್ತು ತಂಡದವರಿಂದ ಭಜನೆ ಕಾರ್ಯಕ್ರಮ ನಡೆಯಿತು. ಜ್ಯೋತಿ ಅವರು ಪರಿಸರ ಜಾಗೃತಿಯ ಬಗ್ಗೆ ಮಾಹಿತಿಯನ್ನು ನೀಡಿದರು.

ಗಾಂಧೀಜಿ ಅವರು ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ತಂಗಿದ್ದರಿಂದ ಈ ಸ್ಥಳದಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು. ಜೊತೆಗೆ ಪ್ಲಾಸ್ಟಿಕ್ ನಿಷೇಧ ಮಾಡಿ, ಮನೆ, ಅಂಗಡಿ ಮತ್ತು ಇನ್ನಿತರ ಸ್ಥಳಗಳಲ್ಲಿ ಹತ್ತಿಯ ಬಟ್ಟೆ ಕೈಚೀಲಗಳನ್ನು ಬಳಸಿ ಎಂದು ಜಾಗೃತಿ ಮೂಡಿಸಲಾಯಿತು. ಇಂದು ನಮೋ ಬಳ್ಳಾರಿ ತಂಡದ ಪೋಲೋ ರಾಧಾಕೃಷ್ಣ ತಯಾರು ಮಾಡಿಸಿದ ಒಂದು ಸಾವಿರ ಹತ್ತಿ ಬಟ್ಟೆಯ ಕೈಚೀಲಗಳನ್ನು ಉಚಿತವಾಗಿ ಸಾರ್ವಜನಿಕರಿಗೆ, ಪ್ರಯಾಣಿಕರಿಗೆ ವಿತರಣೆ ಮಾಡಿದರು.

ABOUT THE AUTHOR

...view details