ಬಳ್ಳಾರಿ:ಗಣಿನಾಡಲ್ಲಿ ದಿನೇ ದಿನೆ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿವೆ. ಆದರೆ, ಜನರು ಅನವಶ್ಯಕವಾಗಿ ಓಡಾಡುವುದನ್ನ ಮಾತ್ರ ಕಡಿಮೆ ಮಾಡಿಲ್ಲ. ಹೀಗಾಗಿ ಮಾಸ್ಕ್ ಧರಿಸಿದೇ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವವರಿಗೆ ಬಳ್ಳಾರಿ ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ಗಳು 100 ರೂ. ದಂಡ ವಿಧಿಸುತ್ತಿದ್ದಾರೆ.
ಲಾಕ್‌ಡೌನ್ ನಿಯಮ ಉಲ್ಲಂಘನೆ: 2 ಲಕ್ಷ ರೂ. ದಂಡ ವಸೂಲಿ
ಲಾಕ್‌ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಮಿಂಚಿನ ಕಾರ್ಯಾ ಚರಣೆ ನಡೆಸಿದ ಬಳ್ಳಾರಿ ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ಗಳು, 2 ಲಕ್ಷ ರೂ. ದಂಡ ವಸೂಲಿ ಮಾಡಿ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಿದ್ದಾರೆ.
ಲಾಕ್‌ಡೌನ್ ನಿಯಮ ಉಲ್ಲಂಘನೆ...ಸಾರ್ವಜನಿಕರಿಂದ 2 ಲಕ್ಷ ರೂ. ದಂಡ ವಸೂಲಿ
ಸಾರ್ವಜನಿಕರು ಬೆಳಗ್ಗೆ 7 ರಿಂದ ಸಂಜೆ 7 ರವೆಗೆ ಲಾಕ್‌ಡೌನ್ ಸಡಿಲಿಕೆ ನಿಯಮಗಳನ್ನ ಅನುಸರಿಸಿ ರಸ್ತೆಗೆ ಇಳಿಯಬೇಕು ಎನ್ನುವ ಆದೇಶವನ್ನ ಜಿಲ್ಲಾಡಳಿತದಿಂದ ಹೊರಡಿಸಲಾಗಿದೆ. ಆದರೂ ಸಾರ್ವಜನಿಕರು ನಿಯಮ ಉಲ್ಲಂಘಿಸಿ ರಸ್ತೆಗಿಳಿಯುತ್ತಿದ್ದಾರೆ. ಹೀಗೆ ಅನಗತ್ಯವಾಗಿ ಓಡಾಡುವವರಿಂದ 2 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಜನರು ಸರ್ಕಾರದ ನಿಯಮ ಗಾಳಿಗೆ ತೂರಿ ಓಡಾಡುತ್ತಿದ್ದಾರೆ.