ಬಳ್ಳಾರಿ :ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ 20ನೇ ದಿನಕ್ಕೆ ಕಾಲಿರಿಸಿದೆ. ಹಿರಿಯ ಸಾಹಿತಿ ಗುತ್ತಿ ಚಂದ್ರಶೇಖರರೆಡ್ಡಿ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸುವ ಮುಖೇನ ಜಿಲ್ಲೆಯ ನಾನಾ ಕನ್ನಡಪರ, ರೈತ ಸಂಘ ಹಾಗೂ ದಲಿತ ಪರ ಸಂಘಟನೆಗಳ ಮುಖಂಡರು ಈ ದಿನದ ಹೋರಾಟಕ್ಕೆ ಚಾಲನೆ ನೀಡಿದ್ದಾರೆ.
20ನೇ ದಿನಕ್ಕೆ ಕಾಲಿರಿಸಿದ ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿ ಹೋರಾಟ
ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡುವುದು ಸರಿಯಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿಯೇ ಉಳಿಸಲಾಗಿತ್ತು. ಈ ಹಿರಿಯ ಸಾಹಿತಿಗಳ ಕೊಡುಗೆಯೂ ಕೂಡ ಅಪಾರವಾಗಿದೆ. ಹೀಗಾಗಿ, ರಾಜ್ಯ ಸರ್ಕಾರ ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆ ಕೈಬಿಡಬೇಕು..
ಬಳ್ಳಾರಿ ನಗರದ ಡಿಸಿ ಕಚೇರಿ ಎದುರು ಸ್ಥಾಪಿಸಲಾದ ತಾತ್ಕಾಲಿಕ ಟೆಂಟ್ನಲ್ಲಿ ನಾನಾ ಸಂಘಟನೆಗಳ ಮುಖಂಡರು ಭಾಗವಹಿಸಿ ಹಿರಿಯ ಸಾಹಿತಿ ಗುತ್ತಿ ಚಂದ್ರಶೇಖರ್ ರೆಡ್ಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡುವುದು ಸರಿಯಲ್ಲ. ಭಾಷಾವಾರು ವಿಂಗಡಣೆ ವೇಳೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ಅಖಂಡವಾಗಿಯೇ ಉಳಿಸಲಾಗಿತ್ತು. ಈ ಹಿರಿಯ ಸಾಹಿತಿಗಳ ಕೊಡುಗೆಯೂ ಕೂಡ ಅಪಾರವಾಗಿದೆ. ಹೀಗಾಗಿ, ರಾಜ್ಯ ಸರ್ಕಾರ ಕೂಡಲೇ ನೂತನ ವಿಜಯನಗರ ಜಿಲ್ಲೆ ರಚನೆ ಕೈಬಿಡಬೇಕೆಂದು ಹಿರಿಯ ಲೆಕ್ಕಪರಿಶೋಧಕ ಸಿರಿಗೇರಿ ಪನ್ನರಾಜ ಆಗ್ರಹಿಸಿದ್ದಾರೆ.