ಕರ್ನಾಟಕ

karnataka

By

Published : Aug 2, 2020, 11:26 AM IST

ETV Bharat / state

ಬಳ್ಳಾರಿ: 26 ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್

ಬಳ್ಳಾರಿ ಜಿಲ್ಲೆಯಲ್ಲಿ 26 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕಿರೋದು ದೃಢಪಟ್ಟಿದೆ.

bellary
bellary

ಬಳ್ಳಾರಿ: ನಿನ್ನೆಯ ದಿನವಷ್ಟೇ ಜಿಲ್ಲೆಯ 182 ಮಂದಿ ಪೊಲೀಸ್ ಸಿಬ್ಬಂದಿಯನ್ನ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಆ್ಯಂಟಿಜೆನ್ ಕಿಟ್ ಮೂಲಕ ಕೋವಿಡ್ ಟೆಸ್ಟ್‌ಗೆ ಒಳಪಡಿಸಿದ್ದು, ಈ ಪೈಕಿ 26 ಮಂದಿ ಪೊಲೀಸರಿಗೆ ಕೊರೊನಾ ವ್ಕಕರಿಸಿರುವುದು ದೃಢಪಟ್ಟಿದೆ.

50 ವರ್ಷ ಮೇಲ್ಪಟ್ಟ ವಯೋಮಾನದವರನ್ನ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಆ್ಯಂಟಿಜೆನ್ ಕಿಟ್ ಮೂಲಕ ಅರ್ಧಗಂಟೆಯಲ್ಲೇ ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು, ಆ ಪೈಕಿ 26 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರೋದು ಖಾತ್ರಿಯಾಗಿದೆ.

ಈ 26 ಮಂದಿ ಪೊಲೀಸ್ ಸಿಬ್ಬಂದಿಗೆ ಹೋಂ ಐಸೊಲೇಷನ್‌ನಲ್ಲಿರುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಹಾಗೂ ಜಿಲ್ಲಾಧಿಕಾರಿ ಎಸ್.ಎಸ್‌. ನಕುಲ್ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಪೊಲೀಸ್ ಠಾಣೆಗಳಲ್ಲಿ ಕೊರೊನಾ ಪಾಸಿಟಿವ್ ಕೇಸ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಎಲ್ಲ ಠಾಣೆಗಳ ಸಿಬ್ಬಂದಿಗೆ ಕೋವಿಡ್ ಟೆಸ್ಟ್‌ಗೆ ಒಳಪಡಿಸಲಾಗುವುದು ಎಂದು ಎಸ್ಪಿ ಸಿ.ಕೆ. ಬಾಬಾ ತಿಳಿಸಿದ್ದಾರೆ.

ಈವರೆಗೂ ಜಿಲ್ಲೆಯ ಹೊಸಪೇಟೆ, ಹರಪನಹಳ್ಳಿ ಮತ್ತು ಬಳ್ಳಾರಿ ಸೇರಿದಂತೆ ಇತರೆಡೆ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲವರು ಈ ಕೋವಿಡ್ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ್ದಾರೆ.

ABOUT THE AUTHOR

...view details