ಬಳ್ಳಾರಿ:ಸಚಿವರಾದ ಶ್ರೀರಾಮುಲು, ಆನಂದ ಸಿಂಗ್, ಶಾಸಕ ಸೋಮಶೇಖರ್ ರೆಡ್ಡಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಕುತಂತ್ರ ಮಾಡಿ ಡ್ರಾಮಾ ಮಾಡುತ್ತಿದ್ದಾರೆ ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷ ಜೆ. ಎಸ್. ಆಂಜನೇಯಲು ಆರೋಪಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ, ಬಳ್ಳಾರಿ ಅಖಿಲ ಕರ್ನಾಟಕ ಕಮ್ಮ ಯುವಶಕ್ತಿ ಹಾಗೂ ಕಮ್ಮ ಮಹಾಜನ ಸಂಘದಿಂದ ಬಳ್ಳಾರಿ ಜಿಲ್ಲಾ ಅಖಂಡ ಹೋರಾಟ ಸಮಿತಿಯ ಅನಿರ್ದಿಷ್ಟಾವಧಿ ಹೋರಾಟ ಬೆಂಬಲಿಸಿ ಸಂಘದ ನೇತೃತ್ವದಲ್ಲಿ ಇಂದು ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು.