ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಉಲ್ಬಣವಾಗುತ್ತಿದ್ದು ಇಂದು ಬರೋಬ್ಬರಿ 275 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.
ಬಳ್ಳಾರಿ: 275 ಕೊರೊನಾ ಪಾಸಿಟಿವ್ ಕೇಸ್ ಪತ್ತೆ.. ಇಬ್ಬರು ಮೃತ
ಜಿಲ್ಲೆಯಲ್ಲಿಂದು 275 ಮಂದಿಗೆ ಸೋಂಕು ತಗುಲಿದ್ದು, ಇಬ್ಬರು ಕೊನೆಯುಸಿರೆಳೆದಿದ್ದಾರೆ. ಹಾಗೂ 408 ಜನರು ಸಂಪೂರ್ಣ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Ballary corona case
ಇಂದು ಒಂದೇ ದಿನ 275 ಮಂದಿಗೆ ಕೊರೊನಾ ಸೋಂಕು ತಗುಲಿದ ಪರಿಣಾಮ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6582ಕ್ಕೆ ಏರಿಕೆಯಾಗಿದೆ. ಈ ಪೈಕಿ 3416 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ 3069 ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 97ಕ್ಕೆ ಏರಿಕೆಯಾಗಿದೆ. ಇನ್ನೂ 408 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.