ಬಳ್ಳಾರಿ: ಜಿಲ್ಲೆಯಲ್ಲಿ ಹೊಸದಾಗಿ 28 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 537ಕ್ಕೆ ಏರಿಕೆಯಾಗಿದೆ.
ಗಣಿ ಜಿಲ್ಲೆಯಲ್ಲಿ ಇಂದು 28 ಕೊರೊನಾ ಪ್ರಕರಣಗಳು ದೃಢ - Bellary corona news
ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 537ಕ್ಕೆ ಏರಿಕೆಯಾಗಿದ್ದು, ಹೊಸದಾಗಿ 28 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಆ ಪೈಕಿ 20 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ.
ಜಿಲ್ಲೆಯಲ್ಲಿ ಇಂದು 28 ಮಂದಿಯ ಕೋವಿಡ್ ವರದಿ ಪಾಸಿಟಿವ್ ಬಂದಿದೆ. ಆ ಪೈಕಿ 20 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಈ ವರೆಗೂ 309 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ನೌಕರರ ಪ್ರೈಮರಿ ಹಾಗೂ ಸೆಕೆಂಡರಿ ಕಾಂಟ್ಯಾಕ್ಟ್ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಖಚಿತ ಪಡಿಸಿವೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 537ಕ್ಕೆ ಏರಿಕೆಯಾಗಿದ್ದು, 145 ಮಂದಿ ಗುಣಮುಖರಾಗಿದ್ದಾರೆ. ಏಳು ಮಂದಿ ಸಾವನ್ನಪ್ಪಿದ್ದಾರೆ. 385 ಸಕ್ರಿಯ ಪ್ರಕರಣಗಳಿವೆ.