ಬಳ್ಳಾರಿ:ಜಿಲ್ಲೆಯಲ್ಲಿಂದು ಹೊಸದಾಗಿ 296 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28,485ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿಂದು ಹೊಸದಾಗಿ 296 ಮಂದಿಗೆ ಕೊರೊನಾ ಪಾಸಿಟಿವ್ - Bellary corona latest news
ಬಳ್ಳಾರಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.
Bellary
ಜಿಲ್ಲೆಯಲ್ಲಿ ಇಂದು 362 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 23,317 ಮಂದಿ ಗುಣಮುಖರಾದಂತಾಗಿದೆ. ಇನ್ನು ಜಿಲ್ಲೆಯಲ್ಲಿ 4,858 ಸಕ್ರಿಯ ಪ್ರಕರಣಗಳಿವೆ.
ಮಹಾಮಾರಿ ಸೋಂಕಿಗೆ ಒಂಭತ್ತು ಮಂದಿ ಸಾವನ್ನಪ್ಪಿದ್ದು, ಇದುವರೆಗೆ ಮೃತಪಟ್ಟಿದವರ ಸಂಖ್ಯೆ 362 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.