ಬಳ್ಳಾರಿ: ಗಣಿನಾಡಿನಲ್ಲಿಂದು ಮೂರು ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿ ಮತ್ತೆ ಮೂವರಲ್ಲಿ ಕೊರೊನಾ ದೃಢ: ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ - ಬಳ್ಳಾರಿ ಕೊರೊನಾ ಕೇಸ್
ಮುಂಬೈ, ದೆಹಲಿಯಿಂದ ಬಳ್ಳಾರಿಗೆ ಆಗಮಿಸಿದ್ದ ಜಿಲ್ಲೆಯ ಬೇರೆ ಬೇರೆ ಗ್ರಾಮಗಳ ವಲಸೆ ಕಾರ್ಮಿಕರನ್ನು ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಇಂದು ಮೂವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
![ಬಳ್ಳಾರಿಯಲ್ಲಿ ಮತ್ತೆ ಮೂವರಲ್ಲಿ ಕೊರೊನಾ ದೃಢ: ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆ 3 new corona case in ballary](https://etvbharatimages.akamaized.net/etvbharat/prod-images/768-512-7317647-thumbnail-3x2-corona.jpg)
ಹೊರ ರಾಜ್ಯಗಳಿಂದ ಬಂದವರನ್ನು ಬಳ್ಳಾರಿ ನಗರ ಹೊರವಲಯದ ಅಲ್ಲೀಪುರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಈ ಮೂವರ ಗಂಟಲು ದ್ರವವನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೊನಾ ಸೋಂಕು ಇರುವುದು ಖಾತ್ರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
ವಲಸೆ ಕಾರ್ಮಿಕರು ಅನುಭವಿಸುವ ಸಂಕಷ್ಟವನ್ನರಿತ ಕೇಂದ್ರ ಸರ್ಕಾರ ತಮ್ಮ ತಮ್ಮ ರಾಜ್ಯಗಳಿಗೆ ತೆರಳಲು ಅವಕಾಶ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಮುಂಬೈ, ದೆಹಲಿಯಿಂದ ಬಳ್ಳಾರಿಗೆ ಆಗಮಿಸಿದ್ದ ಜಿಲ್ಲೆಯ ಬೇರೆ ಬೇರೆ ಗ್ರಾಮಗಳ ವಲಸೆ ಕಾರ್ಮಿಕರನ್ನು ಜಿಲ್ಲಾಡಳಿತದಿಂದ ಕ್ವಾರಂಟೈನ್ ಮಾಡಲಾಗಿತ್ತು. ಇದೀಗ ಮೂವರಲ್ಲಿ ಕೊರೊನಾ ಪತ್ತೆಯಾಗಿದ್ದು, ಅವರೆಲ್ಲರನ್ನೂ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದ್ದು, ಈವರೆಗೂ 15 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದಾರೆ. ಸದ್ಯ ಐಸೋಲೇಷನ್ನಲ್ಲಿರುವವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.