ಬಳ್ಳಾರಿ:ನಾಳೆಯಿಂದ ದ್ವಿತಿಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ದತೆ ನಡೆದಿದೆ. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳನ್ನು ಸಿದ್ದಪಡಿಸಲಾಗಿದೆ. ಪರೀಕ್ಷಾ ಸಿದ್ದತೆ ಕುರಿತು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ರಾಜು ಮಾಹಿತಿ ನೀಡಿದರು.
ಅವಳಿ ಜಿಲ್ಲೆಗಳ ಪೈಕಿ ಬಳ್ಳಾರಿಯಲ್ಲಿ 16 ಪರಿಕ್ಷಾ ಕೇಂದ್ರಗಳು ಹಾಗೂ ವಿಜಯನಗರ ಜಿಲ್ಲೆಯಲ್ಲಿ 18 ಕೇಂದ್ರಗಳನ್ನು ತೆರೆಯಲಾಗಿದೆ. ಎರಡೂ ಜಿಲ್ಲೆಯಿಂದ 30,647 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ 26,087 ಪ್ರೆಶರ್, 1,376 ಖಾಸಗಿ, 3,184 ರಿಪೀಟರ್ಸ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.