ಕರ್ನಾಟಕ

karnataka

ETV Bharat / state

ಬಳ್ಳಾರಿ: 312 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ

ಬಳ್ಳಾರಿಯಲ್ಲಿ ಇಂದು ಒಂದೇ ದಿನ 312 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದ್ದು, ಆರು ಮಂದಿ ಸಾವನ್ನಪ್ಪಿದ್ದಾರೆ‌ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Bellary
Bellary

By

Published : Aug 24, 2020, 4:45 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 312 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,001ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 312 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 18,001 ಕ್ಕೆ ಏರಿಕೆಯಾಗಿದ್ದು, 12,152 ಮಂದಿ ಗುಣಮುಖರಾಗಿದ್ದಾರೆ. 224 ಮಂದಿ ಸಾವನ್ನಪ್ಪಿದ್ದು, 5,625 ಸಕ್ರಿಯ ಪ್ರಕರಣಗಳಿವೆ.

ಇಂದು ಆರು ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಅಂದಾಜು 442 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details