ಹೊಸಪೇಟೆ:ತುಂಗಭದ್ರಾ ಜಲಾಶಯದಿಂದ 10 ಕ್ರಸ್ಟ್ ಗೇಟ್ ಮೂಲಕ 34,661 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಓಪನ್: 34,661 ಕ್ಯೂಸೆಕ್ ನೀರು ಬಿಡುಗಡೆ... - ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಓಪನ್
ತುಂಗಭದ್ರಾ ಜಲಾಶಯದಲ್ಲಿ 1632.81 ಅಡಿ ನೀರು ಇದ್ದು, 100.124 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳ ಹರಿವು ಹೆಚ್ಚಳವಾಗಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ತುಂಗಭದ್ರಾ ಜಲಾಶಯ ಕ್ರಸ್ಟ್ ಗೇಟ್ ಓಪನ್
ಎರಡು ಅಡಿ ಎತ್ತರದಲ್ಲಿ 10 ಕ್ರಸ್ಟ್ ಗೇಟ್ ಮೂಲಕ ನದಿಗೆ 34,661 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಡ್ಯಾಂ ಒಳಹರಿವು ಕುಸಿತ ಕಂಡಿತ್ತು. ಈಗ ಮತ್ತೆ ಉತ್ತಮ ಒಳಹರಿವು ದಾಖಲಾಗಿದೆ.
ಸದ್ಯ ಜಲಾಶಯದಲ್ಲಿ 1632.81 ಅಡಿ ನೀರು ಇದ್ದು, 100.124 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಒಳ ಹರಿವು ಹೆಚ್ಚಳವಾಗಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.