ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 370 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 17,689 ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿಂದು 370 ಕೋವಿಡ್ ಪ್ರಕರಣಗಳು ಪತ್ತೆ: ಏಳು ಬಲಿ
ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 370 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಏಳು ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ.
Bellary
ಜಿಲ್ಲೆಯಲ್ಲಿ ಇಂದು 370 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 11,710 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 218 ಮಂದಿ ಸಾವನ್ನಪ್ಪಿದ್ದಾರೆ. ಇನ್ನು 5,761 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಇಂದು ಏಳು ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ. ಅಂದಾಜು 304 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.