ಬಳ್ಳಾರಿ : ಜಿಲ್ಲೆಯಲ್ಲಿ ಇಂದು ಹೊಸದಾಗಿ 382 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇದರಿಂದ ಸೋಂಕಿತರ ಸಂಖ್ಯೆ 25786ಕ್ಕೆ ಏರಿಕೆಯಾಗಿದೆ. 20975 ಮಂದಿ ಗುಣಮುಖರಾಗಿದ್ದಾರೆ.
ಬಳ್ಳಾರಿಯಲ್ಲಿಂದು ಹೊಸದಾಗಿ 382 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆ - Bellary latest news
ಬಳ್ಳಾರಿ ಜಿಲ್ಲೆಯಲ್ಲಿ ಇಂದು 382 ಮಂದಿಯಲ್ಲಿ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 8 ಜನ ಮೃತಪಟ್ಟಿರುವ ವರದಿಯಾಗಿದೆ.
ಸಂಗ್ರಹ ಚಿತ್ರ
ಇಲ್ಲಿಯವರೆಗೆ ಒಟ್ಟು 330 ಸೋಂಕಿತರು ಮೃತಪಟ್ಟ ವರದಿಯಾಗಿದೆ. 4481 ಸಕ್ರಿಯ ಪ್ರಕರಣಗಳಿವೆ. ಈ ದಿನ 8 ಜನ ಮೃತಪಟ್ಟಿದ್ದಾರೆ. ಅಂದಾಜು 359 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.