ಬಳ್ಳಾರಿ :ಇಂದು ಹೊಸದಾಗಿ 39 ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 509ಕ್ಕೆ ಏರಿಕೆಯಾಗಿದೆ.
ಬಳ್ಳಾರಿಯಲ್ಲಿ ಇಂದು 39 ಕೊರೊನಾ ಪಾಸಿಟಿವ್ ಕೇಸ್ ಪತ್ತೆ - ಬಳ್ಳಾರಿ ಕೊರೊನಾ ಕೇಸ್
ಸೋಂಕಿತ 39 ಮಂದಿಯಲ್ಲಿ 17 ಜನರು ಜಿಂದಾಲ್ ಸಮೂಹ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಈವರೆಗೂ 289 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ನೌಕರರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದಾರೆ..
ಬಳ್ಳಾರಿಯಲ್ಲಿ ಇಂದು 39 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆ
ಸೋಂಕಿತ 39 ಮಂದಿಯಲ್ಲಿ 17 ಜನರು ಜಿಂದಾಲ್ ಸಮೂಹ ಸಂಸ್ಥೆಯ ಉದ್ಯೋಗಿಗಳಾಗಿದ್ದಾರೆ. ಈವರೆಗೂ 289 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ನೌಕರರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ಖಚಿತಪಡಿಸಿವೆ.
ಜಿಲ್ಲೆಯಲ್ಲಿ ಈವರೆಗೆ 509 ಪಾಸಿಟಿವ್ ಪ್ರಕರಣ ದೃಢಪಟ್ಟಿವೆ. ಆ ಪೈಕಿ 145 ಮಂದಿ ಗುಣಮುಖರಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ. ಉಳಿದ 359 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.