ಬಳ್ಳಾರಿ: ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 40ಕ್ಕಿಂತ ಹೆಚ್ಚಿನ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 6ರಂದು ಸ್ಯಾನಿಟೈಸರ್ ಮಾಡಿ, ಪಾಲಿಕೆಯನ್ನು ಸೀಲ್ಡೌನ್ ಮಾಡಲಾಗುವುದು ಎಂದು ಪಾಲಿಕೆ ಆಯುಕ್ತರಾದ ತುಷಾರಮಣಿ ತಿಳಿಸಿದ್ದಾರೆ.
ಬಳ್ಳಾರಿ: ಪಾಲಿಕೆಯ 40ಕ್ಕೂ ಹೆಚ್ಚು ಸಿಬ್ಬಂದಿಗೆ ಸೋಂಕು ದೃಢ - corona cases in corporation
ಬಳ್ಳಾರಿ ಮಹಾನಗರ ಪಾಲಿಕೆಯ 40 ಸಿಬ್ಬಂದಿಗೆ ಗುರುವಾರ (ಆ.5) ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಪಾಲಿಕೆ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ.
ಮಹಾನಗರ ಪಾಲಿಕೆ ಸಿಬ್ಬಂದಿಗೆ ಕೊರೊನಾ
ಇಂದು ರ‍್ಯಾಪಿಡ್ ಪರೀಕ್ಷೆ ಮಾಡಲಾಗಿದ್ದು, 40ಕ್ಕಿಂತ ಹೆಚ್ಚಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದೆ. ಪಾಲಿಕೆ ಕಚೇರಿಯಲ್ಲಿ ಬಹಳಷ್ಟು ಜನರಿಗೆ ಕೊರೊನಾ ದೃಢಪಟ್ಟಿರುವ ಹಿನ್ನೆಲೆ ಗುರುವಾರ ಸಂಪೂರ್ಣವಾಗಿ ಪಾಲಿಕೆಯಲ್ಲಿ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಶುಕ್ರವಾರದಿಂದ ಕಚೇರಿ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಬಳ್ಳಾರಿ ನಾಗರಿಕರು ಗಮನಹರಿಸಬೇಕು ಎಂದು ತಿಳಿಸಿದರು.