ಬಳ್ಳಾರಿ:ಜಿಲ್ಲೆಯಲ್ಲಿ ಈವರೆಗೆ ಅಂದಾಜು 108 ಮಂದಿ ಆರೋಗ್ಯ ಸೇವೆಯಲ್ಲಿ ತೊಡಗಿಕೊಂಡಿರುವ ವಾರಿಯರ್ಸ್ಗಳಿಗೆ ಕೊರೊನಾ ಸೋಂಕು ಅಂಟಿದೆ. ಆ ಪೈಕಿ 43 ಮಂದಿ ಖಾಸಗಿ ಮತ್ತು ಸರ್ಕಾರಿ ವೈದ್ಯರೇ ಹೆಚ್ಚಿದ್ದಾರೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯಾಧಿಕಾರಿ ಡಾ. ಹೆಚ್. ಎಲ್. ಜನಾರ್ಧನ ತಿಳಿಸಿದ್ದಾರೆ.
ಬಳ್ಳಾರಿಯ ಡಿಹೆಚ್‌ಒ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಯ 4 ಮಂದಿ ವೈದ್ಯರು ಸೇರಿದಂತೆ ಸರ್ಕಾರಿ ವೈದ್ಯರಿಗೂ ಕೂಡ ಸೋಂಕು ತಗುಲಿದೆ. ಅದರಲ್ಲಿ ಮದ್ಯವಯಸ್ಸಿನವರಿಗೆ ಹೆಚ್ಚಾಗಿ ಕಾಣಿಸಿಕೊಂಡಿದೆ. ಸ್ನಾತಕೋತ್ತರ ಪದವಿ ಸೋಂಕು ಕಾಣಿಸಿದೆ. ವೈದ್ಯರಲ್ಲೂ ಕೂಡ ಮಧುಮೇಹ (ಸಕ್ಕರೆ ಕಾಯಿಲೆ) ರಕ್ತ ದೊತ್ತಡ (ಬಿಪಿ) ಕಾಯಿಲೆಯಿಂದ ಬಳಲುತ್ತಿರುವವರೂ ಇದ್ದಾರೆ. ಈಗಾಗಲೇ ಅವರೆಲ್ಲರೂ ಕೂಡ ಗುಣಮುಖರಾಗಿದ್ದಾರೆ. ಅಲ್ಲದೇ, ಬಳ್ಳಾರಿಯ ವಿಮ್ಸ್ ಹಾಗೂ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯ ಡಿ ಗ್ರೂಪ್ ನೌಕರರು, ಲ್ಯಾಬ್ ಟೆಕ್ನಿಷಿಯನ್ ಸೇರಿದಂತೆ ಇತರೆ ವಲಯದ ಸಿಬ್ಬಂದಿಗೂ ಕೂಡ ಕೊರೊನಾ ಸೋಂಕಿರೋದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ 53 ಕ್ಕೂ ಅಧಿಕ ಮಂದಿ ಗುಣಮುಖರಾದ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅಂದಾಜು 30 ಕ್ಕೂ ಅಧಿಕ ಮಂದಿಯನ್ನ ಐಸೊಲೇಷನ್ನಲ್ಲಿ ಇರಿಸಲಾಗಿದೆ. ಅವರೆಲ್ಲರೂ ಕೂಡ ಗುಣಮುಖರಾಗುತ್ತಿದ್ದು, ಶೀಘ್ರವೇ ಬಿಡುಗಡೆಗೊಳಿಸಲು ಕ್ರಮ ವಹಿಸಲಾಗುವುದು ಎಂದರು.