ಬಳ್ಳಾರಿ: ಕೊರೊನಾ ಕೆಂಗಣ್ಣು ಜಿಲ್ಲೆಯ ಮೇಲೆ ಬಿದ್ದಿದ್ದು ಇಂದು ಬರೋಬ್ಬರಿ 8 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ 486 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ.
ಬಳ್ಳಾರಿ; ಕೊರೊನಾಗೆ 8 ಮಂದಿ ಬಲಿ.. 486 ಸೋಂಕಿತರು ಪತ್ತೆ - Ballary corona news
ಜಿಲ್ಲೆಯಲ್ಲಿಂದು 486 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಮತ್ತು 8 ಮಂದಿ ಸೋಂಕಿಗೆ ತುತ್ತಾಗಿ ಕೊನೆಯುಸಿರೆಳೆದಿದ್ದಾರೆ.
Ballary corona cases
ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 19112 ಮತ್ತು ಮೃತರ ಸಂಖ್ಯೆ 237ಕ್ಕೆ ಏರಿಕೆಯಾಗಿದೆ. ಇಂದು 516 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ - 19 ಆಸ್ಪತ್ರೆಯಿಂದ ಬಿಡುಗಡೆಯಾಗುವ ಮೂಲಕ ಗುಣಮುಖರ ಸಂಖ್ಯೆ 13672 ಕ್ಕೆ ತಲುಪಿದೆ. ಸದ್ಯ 5203 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.