ಕರ್ನಾಟಕ

karnataka

ETV Bharat / state

ಹೊಸಪೇಟೆ ಮೂಲ ಸೌಕರ್ಯಕ್ಕಾಗಿ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ: ಸಚಿವ ಆನಂದ್​ ಸಿಂಗ್ - Hosapete infrastructure

ರಾಜ್ಯ ಸರ್ಕಾರವು ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡಣೆ ಮಾಡಲಿದೆ. ಹೊಸಪೇಟೆಗೆ ಮೂಲ ಸೌಕರ್ಯಕ್ಕಾಗಿ 500 ಕೋಟಿ ರೂ. ಅನುದಾನದ ಬೇಡಿಕೆಯನ್ನು ಸಲ್ಲಿಸಲಾಗಿದೆ.‌ ಜಿಲ್ಲಾ ಕಚೇರಿ, ಜಿಲ್ಲಾ ವರಿಷ್ಠಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಬೇಡಿಕೆಯನ್ನು ಇಡಲಾಗಿದೆ ಎಂದು ಸಚಿವ ಆನಂದ್​ ಸಿಂಗ್​ ಹೇಳಿದರು.

500-crore-demand-for-hosapete-infrastructure
ಸಚಿವ ಆನಂದ ಸಿಂಗ್

By

Published : Jan 9, 2021, 10:04 PM IST

ಹೊಸಪೇಟೆ: ನಗರದ ಅಭಿವೃದ್ಧಿಗಾಗಿ ಬಜೆಟ್​ನಲ್ಲಿ 500 ಕೋಟಿ. ರೂ. ಅನುದಾನಕ್ಕೆ ಬೇಡಿಕೆ ಇಟ್ಟಿರುವುದಾಗಿ ಅರಣ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಆನಂದ್​ ಸಿಂಗ್ ಹೇಳಿದರು.

ಹೊಸಪೇಟೆ ಮೂಲ ಸೌಕರ್ಯಕ್ಕಾಗಿ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ

ನಗರದ ಪಟೇಲ್​ ನಗರ ಬಿಜೆಪಿ ಕಚೇರಿಯಲ್ಲಿ ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಬೆಂಬಲಿತ ಸದಸ್ಯರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಬಂಬಲಿತ ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದರು.

ಅಲ್ಲದೆ ಎಷ್ಟು ಜನ್ಮ ಎತ್ತಿದರೂ ಬಿಜೆಪಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಋಣ ತೀರಿಸಲು ಸಾಧ್ಯವಿಲ್ಲ. ವಿಜಯನಗರ ಜಿಲ್ಲೆಯನ್ನು ಘೋಷಿಸಿದ ಅವರನ್ನು ಸದಾ ನೆನಪು ಇಟ್ಟುಕೊಳ್ಳಬೇಕು. ಪಶ್ಚಿಮ ತಾಲೂಕು ಜನರು ಪಕ್ಷಾತೀತವಾಗಿ ಅವರನ್ನು ಮರೆಯುವುದಕ್ಕೆ ಆಗುವುದಿಲ್ಲ ಎಂದರು.

ಓದಿ-ಕೊಪ್ಪಳದಲ್ಲಿ ದೇಶದ ಮೊದಲ ಟಾಯ್ ಕ್ಲಸ್ಟರ್ ಸ್ಥಾಪನೆ: ಉದ್ಯೋಗ ಸೃಷ್ಟಿ ಭರವಸೆ

500 ಕೋಟಿ ರೂ. ಬೇಡಿಕೆ

ರಾಜ್ಯ ಸರ್ಕಾರವು ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡಣೆ ಮಾಡಲಿದೆ. ಹೊಸಪೇಟೆಗೆ ಮೂಲ ಸೌಕರ್ಯಕ್ಕಾಗಿ 500 ಕೋಟಿ ರೂ. ಅನುದಾನದ ಬೇಡಿಕೆಯನ್ನು ಸಲ್ಲಿಸಲಾಗಿದೆ.‌ ಜಿಲ್ಲಾ ಕಚೇರಿ, ಜಿಲ್ಲಾ ವರಿಷ್ಠಾಧಿಕಾರಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಚೇರಿ ಸೇರಿದಂತೆ ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಬೇಡಿಕೆ ಇಡಲಾಗಿದೆ ಎಂದು ತಿಳಿಸಿದರು.

ಪ್ರತ್ಯೇಕ ಜಿಲ್ಲೆ ಘೋಷಣೆಯಾಗಲಿದೆ

ವಿಜಯನಗರ ಜಿಲ್ಲೆ ಘೋಷಣೆಯಾಗಲಿದೆ. ಬಳಿಕ ಅಭಿವೃದ್ಧಿ ಕೆಲಸ ಮಾಡಬೇಕಾಗುತ್ತದೆ. ಆ ಸಂದರ್ಭದಲ್ಲಿ ವಿಜಯನಗರ ವಿಧಾನಸಭಾ ಚುನಾವಣೆ ಸ್ಪರ್ಧೆ ಮಾಡುವ ಕುರಿತು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.

ABOUT THE AUTHOR

...view details