ಹೊಸಪೇಟೆ: ಕಳೆದ ಎರಡು ದಿನಗಳಿಂದ ತುಂಗಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿರುವುದರಿಂದ ಜಲಾಶಯದ 8ನೇ ಕ್ರಸ್ಟ್ ಗೇಟ್ ಮೂಲಕ 50, 530 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.
ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ನದಿಗೆ 50,530 ಕ್ಯೂಸೆಕ್ ನೀರು ಬಿಡುಗಡೆ - ಬಳ್ಳಾರಿ ಸುದ್ದಿ 2020
ಒಳಹರಿವಿನ ಪ್ರಮಾಣ ಆಧರಿಸಿ ನದಿಗೆ ನೀರನ್ನು ಹರಿಸಲಾಗುವುದು. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತುಂಗಭದ್ರಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಜಲಾಶಯದಲ್ಲಿ 1632.80 ಅಡಿ ನೀರು ಇದ್ದು, 100.086 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 41,959 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಲ್ಲದೆ ಬುಧವಾರ ಜಲಾಶಯಕ್ಕೆ 33,622 ಕ್ಯೂಸೆಕ್ ನೀರು ಹರಿದು ಬಂದಿದ್ದು, ತುಂಗಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಹಲವು ದಿನಗಳಿಂದ ಒಳಹರಿವಿನ ಪ್ರಮಾಣ ತಗ್ಗಿತ್ತು. ಈಗ ಮತ್ತೆ ಉತ್ತಮ ಮಳೆಯಾಗುತ್ತಿದೆ. ಒಳಹರಿವಿನ ಪ್ರಮಾಣ ಆಧರಿಸಿ ನದಿಗೆ ನೀರನ್ನು ಹರಿಸಲಾಗುವುದು. ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತುಂಗಭದ್ರಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.