ಕರ್ನಾಟಕ

karnataka

ETV Bharat / state

ಬಳ್ಳಾರಿಯಲ್ಲಿಂದು 514 ಕೊರೊನಾ ಕೇಸ್ ಪತ್ತೆ: 9 ಜನ ಸಾವು

ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 514 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು 9 ಮಂದಿ ಸಾವನ್ನಪ್ಪಿದ್ದಾರೆ.

Bellary
Bellary

By

Published : Aug 21, 2020, 5:21 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿಂದು ಹೊಸದಾಗಿ 514 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 16,767 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 514 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 10,884 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 204 ಮಂದಿ ಸಾವನ್ನಪ್ಪಿದ್ದಾರೆ. 5,679 ಸಕ್ರಿಯ ಪ್ರಕರಣಗಳಿವೆ.

ಇಂದು ಕೋವಿಡ್ ಗೆ 9 ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 404 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details