ಬಳ್ಳಾರಿ:ಗಣಿಜಿಲ್ಲೆಯಲ್ಲಿಂದು ಹೊಸ 65 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದು, ಕೊರೊನಾ ಸೋಂಕಿತರ ಸಂಖ್ಯೆ 1,619ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಒಂದೇ ದಿನ 65 ಮಂದಿಗೆ ಈ ಮಹಾಮಾರಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ 510 ನೌಕರರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,619ಕ್ಕೆ ಏರಿಕೆಯಾಗಿದ್ದು, 1,063 ಮಂದಿ ಗುಣಮುಖರಾಗಿದ್ದಾರೆ. 42 ಮಂದಿ ಸಾವನ್ನಪ್ಪಿದ್ದಾರೆ. 577 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.
ಇಂದು 287 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಂದಾಜು 46 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್. ಎಸ್.ನಕುಲ್ ತಿಳಿಸಿದ್ದಾರೆ.