ಕರ್ನಾಟಕ

karnataka

ETV Bharat / state

ಒಂದೇ ದಿನ ಬಳ್ಳಾರಿಯ 684 ಮಂದಿಗೆ ಸೋಂಕು; ಮೂವರು ಬಲಿ! - Ballary corona news

ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಇಂದು ಒಂದೇ ದಿನ 684 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಮತ್ತು ಮೂವರು ಸಾವನ್ನಪ್ಪಿದ್ದಾರೆ.

Ballary corona case
Ballary corona case

By

Published : Aug 7, 2020, 6:12 PM IST

ಬಳ್ಳಾರಿ:ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಲೇ ಇದ್ದು ಜನರ ನಿದ್ದೆಗೆಡಿಸಿದೆ. ಇಂದು ಒಂದೇ ದಿನ ಬರೋಬ್ಬರಿ 684 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ ಮತ್ತು ಮೂವರು ಮೃತಪಟ್ಟಿದ್ದಾರೆ.

ಈ ಮೂಲಕ ಸೋಂಕಿತರ ಸಂಖ್ಯೆ 9276ಕ್ಕೆ ಮತ್ತು ಮೃತರ ಸಂಖ್ಯೆ 106ಕ್ಕೆ ತಲುಪಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. 9276 ಸೋಂಕಿತರ ಪೈಕಿ 5334 ಮಂದಿ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ 3836 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಇನ್ನೂ 646 ಮಂದಿ ಸಂಪೂರ್ಣ ಗುಣಮುಖರಾಗಿ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ ಇಂದು ಬಿಡುಗಡೆಯಾಗಿದ್ದಾರೆಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details