ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್‍ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ ಮೃತ ಕುಂಟ ಮಂಜುನನ್ನು ಹತ್ಯೆಗೈಯಲು ಭಾಸ್ಕರ್ ಮತ್ತು ಇಲಿಯಾಸ್ ಎಂಬುವವರು 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು. ತಮ್ಮ ವ್ಯಾಪಾರಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗಿದ್ದ ಹಳೆ ವೈಷಮ್ಯವೇ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ.
ಕೋಳಿ ಅನಿಲ್ ಮತ್ತು ಹುಸೇನಿ ಎಂಬುವರು ಕೊಲೆ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಪಾರಿ ಪಡೆದಿದ್ದ ಹಂತಕರು ಹತ್ಯೆಗೀಡಾದ ಮಂಜುವಿನ ಚಲನವಲನದ ಮೇಲೆ ನಿಗಾ ಇಟ್ಟಿದ್ದರು. ಬಳಿಕ ಮಂಜುವನ್ನು ಸೆ.28ರ ರಾತ್ರಿ ಹತ್ಯೆಗೈದಿದ್ದರು. ಕೋಳಿ ಅನಿಲ್, ನವೀನ್ ಮತ್ತು ಅಸೀಫ್‍ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ :ಅಕ್ರಮ ಜಾನುವಾರು ಸಾಗಾಟ: ಬಜರಂಗದಳ ಕಾರ್ಯಕರ್ತರಿಂದ ಗೋವುಗಳ ರಕ್ಷಣೆ