ಬಳ್ಳಾರಿ:ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಬೆಳಗ್ಗೆ 9 ಗಂಟೆಗೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್‌ಧ್ವಜಾರೋಹಣ ನೆರವೇರಿಸಿದರು.
ಗಣಿನಾಡಲ್ಲಿ ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ...
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಕೊಡುಗೆಗಳನ್ನು ನೆನಪಿಸಿಕೊಳ್ಳುವುದು ಹಾಗೂ ಅವರಿಗೆ ನಮ್ಮ ಕೃತಜ್ಞತೆ ಗಳನ್ನು ಸಲ್ಲಿಸುವುದು ಅಭಿಮಾನದ ಸಂಗತಿಯಾಗಿದೆ ಎಂದು ಬಳ್ಳಾರಿ ಡಿಸಿ ನಕುಲ್ ಹೇಳಿದರು.
ನಂತರ ಮಾತನಾಡಿದ ಅವರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಮತ್ತು ಕೊಡುಗೆಗಳನ್ನು ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಬೇಕು. ಹೋರಾಟದಲ್ಲಿ ಭಾಗಿಯಾದವರಲ್ಲಿ ಅನೇಕರು ಇಂದು ನಮ್ಮೊಂದಿಗಿದ್ದಾರೆ. ಅನೇಕರು ನಮ್ಮನ್ನು ಅಗಲಿದ್ದಾರೆ ಅವರೆಲ್ಲರಿಗೂ ನಮ್ಮ ನಮನಗಳು ಎಂದರು. ಬಳ್ಳಾರಿಯು ಸ್ವಾತಂತ್ರ್ಯ ಹೋರಾಟದಲ್ಲಿ ಮೂಲಭೂತವಾಗಿ ಗಾಂಧಿವಾದದ ಸ್ವರೂಪ ಹೊಂದಿತ್ತು, ಅಹಿಂಸೆಯ ದಾರಿ ಹಿಡಿದಿತ್ತು ಎಂದು ನೆನಪಿಸಿದರು.
ಭ್ರಷ್ಟಾಚಾರ ರಹಿತ ಆಡಳಿತ: ಭ್ರಷ್ಟಾಚಾರ ರಹಿತ ಆಡಳಿತ ನಿರ್ಮಿಸಲು ನಾವೆಲ್ಲರೂ ಪಣತೊಡೋಣ. ಹಾಗೂ ಇನ್ನಿತರ ಜಿಲ್ಲೆಗಳಿಗೂ ಈ ಜಿಲ್ಲೆಯ ಆಡಳಿತದ ಕಾರ್ಯವೈಖರಿ ಮಾದರಿಯಾಗಬೇಕೆಂದರು. ವಿದ್ಯಾರ್ಥಿಗಳು ವಿವಿಧ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಶಾಸಕ ಸೋಮಶೇಖರ ರೆಡ್ಡಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.