ಹೊಸಪೇಟೆ (ಬಳ್ಳಾರಿ): ತಾಲೂಕಿನ ಸೀತಾರಾಮ ತಾಂಡದಲ್ಲಿ 8 ಡೆಂಘೀ ಪ್ರಕರಣ ಪತ್ತೆಯಾಗಿವೆ. ಒಂದು ಕೊಳವೆ ಬಾವಿಯ ನೀರು ಕುಡಿಯಲು ಯೋಗ್ಯವಲ್ಲ ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಡಿ ಭಾಸ್ಕರ್ ಅವರು ಹೇಳಿದ್ದಾರೆ.
ನಗರದ ತಾಲೂಕು ವೈದ್ಯಾಧಿಕಾರಿ ಕಚೇರಿಯಲ್ಲಿ ಈಟಿವಿ ಭಾರದೊಂದಿಗೆ ಮಾತನಾಡಿದ ಅವರು, ಈ ಮುಂಚೆ ಜ್ವರದ ಪ್ರಕರಣ ಕಂಡು ಬಂದಿದ್ದವು. ಜನರು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಇವರ ರಕ್ತದ ಮಾದರಿ ತೆಗೆದುಕೊಂಡು ಪರೀಕ್ಷೆಗೊಳಪಡಿಸಿದಾಗ ಡೆಂಘೀ ಎಂಬುದು ದೃಢಪಟ್ಟಿದೆ ಎಂದಿದ್ದಾರೆ.