ಬಳ್ಳಾರಿ:ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ತಮ್ಮದೇ ಆದ ವ್ಯಕ್ತಿತ್ವಗಳೊಂದಿಗೆ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರೆ. ಹಾಗಾಗಿ ಮಹಾನ್ ವ್ಯಕ್ತಿಗಳ ಗುಣಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಡಯಟ್ನ ಉಪ ಪ್ರಾಚಾರ್ಯರಾದ ಶ್ರೀನಿವಾಸ್ ರೆಡ್ಡಿ ವಿದ್ಯಾರ್ಥಿಗಳಿಗೆ ಹೇಳಿದರು.
ಮಹಾನ್ ವ್ಯಕ್ತಿಗಳ ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ.. - lal bahaddur shasthri birth anniversary
ಬಳ್ಳಾರಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹೂದ್ದರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳು ಸಾಧನೆ, ಹೋರಾಟ, ಅಹಿಂಸೆ, ಸತ್ಯ, ಸತ್ಯಾಗ್ರಹ ವಿಷಯದ ಬಗ್ಗೆ ಮಾತನಾಡಿದರು.
ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್ ಬಹೂದ್ದರ್ ಶಾಸ್ತ್ರಿಯವರ ಜಯಂತಿ ಪ್ರಯುಕ್ತ ಅವರ ಸಾಧನೆ, ಹೋರಾಟ, ಅಹಿಂಸೆ, ಸತ್ಯ, ಸತ್ಯಾಗ್ರಹ ವಿಚಾರಗಳನ್ನು ಹತ್ತಾರು ಪ್ರಶಿಕ್ಷಣಾರ್ಥಿಗಳು ಮಾತನಾಡಿದರು. ಕಾರ್ಯಕ್ರಮಕ್ಕೆ ಮುನ್ನ ಗಾಂಧೀಜಿ ಅವರ ಚಿತಾಭಸ್ಮದ ಕಟ್ಟಡಕ್ಕೆ ಪುಷ್ಪ ಅಲಂಕಾರ ಮಾಡಿ, ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಗಳ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೆ.ರಾಯಪ್ಪ ರೆಡ್ಡಿ, ಉಪ ಪ್ರಾಚಾರ್ಯರಾದ ಶ್ರೀನಿವಾಸ್ ರೆಡ್ಡಿ, ಹಿರಿಯ ಉಪನ್ಯಾಸಕರಾದ ಹನುಮಕ್ಕ, ಜೆ ಎಂ ತಿಪ್ಪೇಸ್ವಾಮಿ, ಸುನಂದ, ಬಸವರಾಜ್ ಶಿವಪುರ ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.