ಬಳ್ಳಾರಿ: ತಾಲೂಕಿನ ಕಪ್ಪಗಲ್ಲು ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ತಡರಾತ್ರಿ 3 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಡರಾತ್ರಿ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಂಭೀರ ಗಾಯ - cylinder explodes ballary
ಬಳ್ಳಾರಿ ತಾಲೂಕಿನ ಕಪ್ಪಗಲ್ಲು ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ತಡರಾತ್ರಿ 3 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಪ್ಪಗಲ್ಲು ಗ್ರಾಮದ ನಿವಾಸಿ ಜಯಮ್ಮ(45) ಹಾಗೂ ಮಗ ಸಂದೀಪ್ (25) ಗಾಯಗೊಂಡವರೆಂದು ಗುರುತಿಸಲಾಗಿದೆ. ಇವರಿಬ್ಬರು ಮನೆಯ ಎರಡನೇ ಮಹಡಿಯಲ್ಲಿ ಮಲಗಿಕೊಂಡಿದ್ದರು. ಕೆಳ ಮಹಡಿಯ ಕಿಚನ್ನಲ್ಲಿದ್ದ ಸಿಲಿಂಡರ್ನಲ್ಲಿರುವ ಅನಿಲ ಸೋರಿಕೆಯಾಗಿ ಮೇಲಿನ ಮಹಡಿಗೆ ಹೋಗಿದೆ. ಎಚ್ಚರಗೊಂಡ ಜಯಮ್ಮ ಗಾಬರಿಯಾಗಿ ಕೊಠಡಿಯೊಳಗಿದ್ದ ಬಲ್ಬ್ ಹಾಕಲು ಸ್ವಿಚ್ ಆನ್ ಮಾಡಿದಾಗ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದಾಳೆ. ಮಗ ಸಂದೀಪ್ನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಬ್ಬರನ್ನು ಹೆಚ್ಚುವರಿ ಚಿಕಿತ್ಸೆಗೆಂದು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.