ಬಳ್ಳಾರಿ: ಜಿಲ್ಲೆಯ ಮಿಲ್ಲರ್ ಪೇಟೆಯ ಆಟೋ ನಿಲ್ದಾಣದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ತಿಳಿಸಿದ್ದಾರೆ.
ಈಟಿವಿ ಭಾರತದೊಂದಿಗೆ ಮಾತನಾಡಿದ ಎಸ್ಪಿ, ಜೀನ್ಸ್ ಫ್ಯಾಕ್ಟರಿಯ ಕಾರ್ಮಿಕ ಇಸ್ಮಾಯಿಲ್ (19) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಆತನೊಂದಿಗೆ ಹಮಾಲಿ ಕೆಲಸ ಮಾಡುತ್ತಿದ್ದ ನಾಲ್ವರು ಕೊಲೆ ಮಾಡಿರುವುದಾಗಿ ತನಿಖೆಯಿಂದ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಓರ್ವ ಆರೋಪಿ ನಮೋಜ್ ಎಂಬಾತನನ್ನು ಬಂಧಿಸಲಾಗಿದೆ.