ಕರ್ನಾಟಕ

karnataka

ETV Bharat / state

ಬಳ್ಳಾರಿ: ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿದ ಸಿಬ್ಬಂದಿ - ಬಳ್ಳಾರಿಯಲ್ಲಿ ಆ್ಯಂಬುಲೆನ್ಸ್​ನಲ್ಲೇ ಮಹಿಳೆಗೆ ಹೆರಿಗೆ

ಸಿಸೇರಿಯನ್ ಹೆರಿಗೆಯಾಗಬೇಕಿದ್ದ ಕೂಡ್ಲಿಗಿ ತಾಲೂಕಿನ ಹುರುಳಿ ಹಾಳ್ ಮ್ಯಾಸರಹಟ್ಟಿಯ ಗರ್ಭಿಣಿಗೆ, 108 ಆ್ಯಂಬುಲೆನ್ಸ್ ಸಿಬ್ಬಂದಿ ಮಾರ್ಗಮಧ್ಯೆ ವಾಹನದಲ್ಲೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ.

A woman gave birth to baby in 108 ambulance
ಆ್ಯಂಬುಲೆನ್ಸ್​ನಲ್ಲೇ ಹೆರಿಗೆ ಮಾಡಿಸಿದ 108 ಸಿಬ್ಬಂದಿ

By

Published : Dec 20, 2020, 6:56 PM IST

ಬಳ್ಳಾರಿ : ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುರುಳಿ ಹಾಳ್ ಮ್ಯಾಸರಹಟ್ಟಿಯ ಗರ್ಭಿಣಿಯೊಬ್ಬರಿಗೆ 108 ಆ್ಯಂಬುಲೆನ್ಸ್ ಸಿಬ್ಬಂದಿಯೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ.

ಮ್ಯಾಸರಹಟ್ಟಿಯ 25 ವರ್ಷದ ರೂಪಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ, ಶಸ್ತ್ರಚಿಕಿತ್ಸೆಗೆಂದು ಚಿಕ್ಕಜೋಗಿಹಳ್ಳಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್​ನಲ್ಲಿ ಕರೆ ತರಲಾಗ್ತಿತ್ತು. ಈ ವೇಳೆ ಮಾರ್ಗಮಧ್ಯೆ ಅತೀವ ನೋವು ಕಾಣಿಸಿಕೊಂಡಿದ್ದರಿಂದ ಆ್ಯಂಬ್ಯುಲೆನ್ಸ್ ಸಿಬ್ಬಂದಿಯೇ ವಾಹನದಲ್ಲೇ ಸುರಕ್ಷಿತ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ -ಮಗು ಆರೋಗ್ಯವಾಗಿದ್ದಾರೆ.

ಶಸ್ತ್ರ ಚಿಕಿತ್ಸೆಯಾಗಬೇಕಿದ್ದ ಮಹಿಳೆಗೆ ಮಾರ್ಗ ಮಧ್ಯೆ ಹೆರಿಗೆ

ಗರ್ಭಿಣಿಗೆ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಸುರಕ್ಷಿತ ಹೆರಿಗೆಗೆ ಶಸ್ತ್ರಚಿಕಿತ್ಸೆ ಮಾಡಲು ಜಗಳೂರು ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದರು. ಹೀಗಾಗಿ, 108 ಆ್ಯಂಬ್ಯುಲೆನ್ಸ್​ನಲ್ಲಿ ಕರೆದುಕೊಂಡು ಹೋಗಲಾಗ್ತಿತ್ತು. ಈ ವೇಳೆ ಮಾರ್ಗ ಮಧ್ಯೆ ಹೆರಿಗೆ ನೋವು ಹೆಚ್ಚಾಗಿದ್ದರಿಂದ ಆರೋಗ್ಯ ಸಹಾಯಕಿ ಜ್ಯೋತಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ರೂಪಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಖಾಜಾ ಸಾಬ್ ತಾಯಿ ಮಗುವನ್ನು ಚಿಕ್ಕಜೋಗಿಹಳ್ಳಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details