ಬಳ್ಳಾರಿ : ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ಪ್ರೋ.ಎಂ.ಎಸ್ ಸುಭಾಷ್ ವಿರುದ್ದ ಬಳ್ಳಾರಿ ಎಬಿವಿಪಿ ಘಟಕದಿಂದ ಪ್ರತಿಭಟನೆ ಮಾಡಲಾಯಿತು.
ವಿವಿ ನೇಮಕಾತಿಯಲ್ಲಿ ಭ್ರಷ್ಟಾಚಾರ ಆರೋಪ... ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ - Kannada news
ವಿವಿ ನೇಮಕಾತಿ ವಿಚಾರದಲ್ಲಿ ಅಕ್ರಮ, ಭ್ರಷ್ಟಾಚಾರವೆಸಗಿದ್ದಾರೆ ಎಂದು ಆರೋಪಿಸಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.
ವಿವಿ ಬ್ರಷ್ಟಾಚಾರ ಅರೋಪ ಎಬಿವಿಪಿ ಕಾರ್ಯಕರ್ತರಿಂದ ಪ್ರತಿಭಟನೆ
ನಗರದ ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿವಿಯ ಬೋಧಕ ಮತ್ತು ಬೋಧಕೇತರ ನೇಮಕಾತಿಯಲ್ಲಿ ಕುಲಪತಿ, ಕುಲಸಚಿವ ಮತ್ತು ಸಿಂಡಿಕೇಟ್ ಸದಸ್ಯರು ಲಂಚ ಪಡೆಯುತ್ತಿರುವುದಾಗಿ ಆರೋಪಿಸಿ ಜಿಲ್ಲಾ ಎಬಿವಿಪಿ ಕಾರ್ಯಕರ್ತರು ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಕಾರ್ಯಕರ್ತ ಅಡಮಿಸ್ವಾಮಿ, ಓಂಪ್ರಕಾಶ್, ಮಲ್ಲೇಶ್, ಯುವರಾಜ್, ರಾಘವೇಂದ್ರ, ಮಂಜು, ಹನುಮಂತ, ಕೌಶಿಕ್ ಇನ್ನಿತರ ಕಾರ್ಯಕರ್ತರು ಭಾಗವಹಿಸಿದರು.