ಬಳ್ಳಾರಿ: ಜಿಲ್ಲೆಯ ಕುರುಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು (ಸೋಮವಾರ) ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬಸ್ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಸಮುದ್ರ ಗ್ರಾಮದ ಹೊರವಲಯದಲ್ಲಿ ಘಟನೆ ಜರುಗಿದೆ. ಸರ್ಕಾರಿ ಬಸ್ಸಿನಲ್ಲಿದ್ದ 30ಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು ವಿಮ್ಸ್‌ಗೆ ದಾಖಲಿಸಲಾಗಿದೆ.
ಗದಗದಲ್ಲಿ ಬೈಕ್ ಅಪಘಾತ:ಬೈಕ್ ನಿಯಂತ್ರಣ ತಪ್ಪಿ ರಭಸವಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಬಳಿ ನಡೆದಿತ್ತು. ಶ್ರೀಧರ ಗಡಗಿ (15) ಹಾಗೂ ಅನುಪಕುಮಾರ ಇಟಗಿ (16) ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡಿದ್ದ ಸವಾರ್ ಮೌನೇಶ ಎಂಬಾತನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಅಬ್ಬಿಗೇರಿ ಗ್ರಾಮದಿಂದ ರೋಣ ಪಟ್ಟಣಕ್ಕೆ ಒಂದೇ ಬೈಕ್ನಲ್ಲಿ ಮೂವರು ಸವಾರರು ತೆರಳುತ್ತಿದರು. ಮಾರ್ಗ ಮಧ್ಯೆ ನಿಯಂತ್ರಣಕ್ಕೆ ಸಿಗದ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಣ ಪೊಲೀಸ್ ಠಾಣೆ ವ್ಯಾಪ್ತಿ ಈ ಘಟನೆ ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.
ಟ್ರ್ಯಾಕ್ಟರ್ - ಬೊಲೆರೋ ವಾಹನದ ನಡುವೆ ಭೀಕರ ಅಪಘಾತ:ಈಅಪಘಾತದಲ್ಲಿಆರು ಮಂದಿ ಮೃತಪಟ್ಟಿದ್ದರು. ಪಶ್ಚಿಮ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಇತ್ತೀಚೆಗೆ ಘಟನೆ ನಡೆದಿದೆ. ಇತರ ಇಬ್ಬರು ಗಾಯಗೊಂಡಿದ್ದರು. ರತ್ನಗಿರಿ - ಪಂಢರಪುರ ರಸ್ತೆಯ ಮೀರಜ್ ಬಳಿ ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರಲ್ಲಿ 12 ವರ್ಷದ ಬಾಲಕ ಮತ್ತು ಮಹಿಳೆಯೂ ಸೇರಿದ್ದಾರೆ. ಗಾಯಗೊಂಡ ಇಬ್ಬರು ಪ್ರಯಾಣಿಕರನ್ನು ಮೀರಜ್ ಸಿವಿಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.