ಕರ್ನಾಟಕ

karnataka

ETV Bharat / state

ಕೂಡ್ಲಿಗಿ ಬಳಿ ಕಾರಿಗೆ ಲಾರಿ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ - Bellary accident

ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಳ್ಳಾರಿಯಲ್ಲಿ ಅಪಘಾತ
ಬಳ್ಳಾರಿಯಲ್ಲಿ ಅಪಘಾತ

By

Published : Jul 29, 2020, 1:39 PM IST

Updated : Jul 29, 2020, 1:45 PM IST

ಬಳ್ಳಾರಿ:ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಕೂಡ್ಲಿಗಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಬಣವಿಕಲ್ಲು ಡಾಬಾ ಬಳಿ ನಡೆದಿದೆ.

ವೆಂಕಟೇಶ ಕುಲಕರ್ಣಿ (53) ಮೃತರು. ಶೃತಿ ಕುಲಕರ್ಣಿ (27) ಹಾಗೂ ಸುಗುಣ (50) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೂಡ್ಲಿಗಿ ಬಳಿ ಕಾರಿಗೆ ಲಾರಿ ಡಿಕ್ಕಿ

ಸ್ಥಳಕ್ಕೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Jul 29, 2020, 1:45 PM IST

ABOUT THE AUTHOR

...view details